ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ: ಬಸವರಾಜ ರಾಯರಡ್ಡಿ

ಸೋಮವಾರ, ಜೂಲೈ 22, 2019
27 °C

ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ: ಬಸವರಾಜ ರಾಯರಡ್ಡಿ

Published:
Updated:

ಹೊಸಪೇಟೆ: ‘ಎಲ್ಲರೂ ಸಚಿವರಾಗಲು ಸಾಧ್ಯವಿಲ್ಲ. ನನಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಅತೃಪ್ತ ಶಾಸಕರು ಹೇಳುತ್ತಿರುವುದು ಸಮಯ ಸಾಧಕತನ’ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಮಲಿಂಗಾರೆಡ್ಡಿ ಅವರಂತೆ ನಾನು ಸಹ ಏಳು ಸಲ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಾಗ ಮೂರು ವರ್ಷಗಳ ಬಳಿಕ ನನ್ನನ್ನು ಮಂತ್ರಿ ಮಾಡಿದ್ದರು. ಅಲ್ಲಿಯವರೆಗೆ ತಾಳ್ಮೆಯಿಂದ ಇದ್ದೆ. ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ತೊರೆಯುವ ಮಾತುಗಳನ್ನು ಆಡಿರಲಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಬಿಜೆಪಿ ವಾಮ ಮಾರ್ಗದಿಂದ, ಬಹಳ ಜಾಣತನ, ನಯವಂಚಕತನದಿಂದ ಕಾಂಗ್ರೆಸ್‌ ಪಕ್ಷದ ಶಾಸಕರಿಂದ ರಾಜೀನಾಮೆ ಕೊಡಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ನಮ್ಮದೇನೂ ಪಾತ್ರವಿಲ್ಲ ಎಂದು ಬಿಜೆಪಿ ಒಂದು ಕಡೆ ಹೇಳುತ್ತಿದೆ. ಆದರೆ, ರಾಜ್ಯಸಭೆ ಸದಸ್ಯ ರಾಜೀವ ಚಂದ್ರಶೇಖರ್‌ ಅವರಿಗೆ ಸೇರಿದ ವಿಮಾನದಲ್ಲಿ ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ. ಬಿ.ಎಸ್‌. ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್‌ ಅವರು ಅದಕ್ಕಾಗಿಯೇ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

‘ಆನಂದ್‌ ಸಿಂಗ್‌ ಅವರು ಕೆಲವು ಬೇಡಿಕೆಗಳನ್ನು ಮುಂದಿಟ್ಟು ರಾಜೀನಾಮೆ ನೀಡಿದ್ದಾರೆ. ಅವರು ಪಕ್ಷದಲ್ಲಿಯೇ ಇರುತ್ತಾರೆ ಎಂಬ ಭರವಸೆ ಇದೆ’ ಎಂದು ಪ್ರಶ್ನೆಗೆ ಉತ್ತರಿಸಿದರು. ಮುಖಂಡರಾದ ವಿ.ಆರ್‌. ಸುದರ್ಶನ್‌, ಆರ್‌. ಧ್ರುವನಾರಾಯಣ, ಬಿ.ವಿ. ಶಿವಯೋಗಿ, ಮೊಹಮ್ಮದ್‌ ಇಮಾಮ್‌ ನಿಯಾಜಿ ಇದ್ದರು.

ಬರಹ ಇಷ್ಟವಾಯಿತೆ?

 • 9

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !