ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೀರಿನಿಂದ ಜೀವ ಸಂಕುಲದ ಉಳಿವು’

Last Updated 22 ಮಾರ್ಚ್ 2019, 14:22 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಶುಕ್ರವಾರ ವಿಶ್ವ ಜಲ ದಿನ ಆಚರಿಸಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೆಂಕೋಬಪ್ಪ ಸಸಿಗೆ ನೀರೆರೆದು ಚಾಲನೆ ನೀಡಿದರು. ಬಳಿಕ ಮಾತನಾಡಿ, ‘ಮಿತ ನೀರಿನ ಬಳಕೆ, ಜಲಮೂಲಗಳ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವದಾದ್ಯಂತ ಜಲ ದಿನ ಆಚರಿಸಲಾಗುತ್ತಿದೆ. ಜೀವಸಂಕುಲದ ಉಳಿವಿಗೆ ನೀರು ಅಮೂಲ್ಯ. ಅದು ಬರಿದಾಗುತ್ತಿರುವ ನೈಸರ್ಗಿಕ ಸಂಪರ್ಮೂಲವಾಗಿದ್ದು, ಅದರ ಸಂರಕ್ಷಣೆ ಬಹಳ ಅನಿವಾರ್ಯವಾಗಿದೆ’ ಎಂದು ಹೇಳಿದರು.

‘ನೀರಿಲ್ಲದೆ ಯಾವ ಜೀವಿಯೂ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ. ಪರಿಸರ ನಾಶ, ನಾಗರಿಕತೆ, ತಂತ್ರಜ್ಞಾನ, ಮನುಷ್ಯನ ದುರಾಸೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಅಂತರ್ಜಲ ಮಟ್ಟ ಕುಸಿಯುತ್ತಿದೆ. ಹೀಗೆಯೇ ಮುಂದುವರಿದರೆ ಮುಂದಿನ ಪೀಳಿಗೆ ನೀರಿಗಾಗಿ ಪರಿತಪಿಸುವ ಕಾಲ ದೂರವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದರು.

‘ಹನಿ ನೀರಿಗೂ ಮಹತ್ವವಿದೆ. ಈ ಕಾರಣಕ್ಕಾಗಿಯೇ 2019ನೇ ವರ್ಷವನ್ನು 'ಜಲ ವರ್ಷ' ಎಂದು ಆಚರಿಸಲಾಗುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಲ ಸಾಕ್ಷರತೆ, ಜಲ ಸಂಗ್ರಹ, ಜಲದ ಮಿತ ಬಳಕೆಯ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ’ ಎಂದರು.

ಶ್ರೀಕುಮಾರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್‌.ಆರ್‌. ಪನಮೇಶಲು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕವಿತಾ ಕಣಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT