ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿಯಲ್ಲಿ ಉತ್ಖನನ ಕಾರ್ಯ ಆರಂಭ

Last Updated 19 ಮಾರ್ಚ್ 2021, 15:17 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಹಂಪಿ ರಾಜರ ಖಾಸಾ ಜಾಗ ಅರಮನೆ ಪ್ರಾಂಗಣದಲ್ಲಿ ಶುಕ್ರವಾರ ಮತ್ತೊಂದು ಸುತ್ತಿನ ಉತ್ಖನನ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಕಮಲಾಪುರದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಜಿ. ಪ್ರಹ್ಲಾದ್ ಮಾತನಾಡಿ, ‘ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅನುಮತಿ ಮೇರೆಗೆ ರಾಜ್ಯ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯು ಉತ್ಖನನ ಕಾರ್ಯ ಕೈಗೆತ್ತಿಕೊಂಡಿದೆ. ಇದರಿಂದ ಮತ್ತಷ್ಟು ಹೊಸ ಸಂಗತಿಗಳು ಬಯಲಿಗೆ ಬರಬಹುದು’ ಎಂದು ತಿಳಿಸಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ, ಕನ್ನಡ ವಿಶ್ವವಿದ್ಯಾಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಸಿ.ಎಸ್. ವಾಸುದೇವನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT