ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗೋಡ್ಸೆ ಅಪ್ರತಿಮ ದೇಶಭಕ್ತ' ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌

Last Updated 8 ಏಪ್ರಿಲ್ 2020, 15:28 IST
ಅಕ್ಷರ ಗಾತ್ರ

ಹೊಸಪೇಟೆ: ‘ನೆನಪಿರಲಿ ಗೋಡ್ಸೆ ಅಪ್ರತಿಮ ದೇಶಭಕ್ತ’ ಎಂಬ ಒಕ್ಕಣೆ ಹೊಂದಿರುವ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ನಗರದ ಮದನ್‌ ಕುಮಾರ್ ಜಂಬಾನಳ್ಳಿ ಎಂಬುವರು ಅವರ ಫೇಸ್‌ಬುಕ್‌ ಖಾತೆಯಲ್ಲಿ ಈ ಪೋಸ್ಟ್‌ ಮಾಡಿದ್ದಾರೆ. ಅದಕ್ಕೆ ಅನೇಕರು ಪ್ರತಿಕ್ರಿಯಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್‌ ಸ್ಕ್ರೀನ್‌ ಶಾಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

ಇಡೀ ದೇಶ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದೆ. ಅದರಲ್ಲೂ ನಗರದಲ್ಲಿ ನಾಲ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇಂತಹ ಸಂದರ್ಭದಲ್ಲಿ ಈ ರೀತಿ ಪೋಸ್ಟ್‌ ಮಾಡಿ ಸಾಮಾಜಿಕ ಶಾಂತಿ ಕದಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ.

ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT