ಸೋಮವಾರ, ಜನವರಿ 17, 2022
21 °C

ಸಾವಿನಲ್ಲಿ ರೈತನ ಸಾರ್ಥಕತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಇಲ್ಲಿನ ಅನಂತಶಯನಗುಡಿಯ ರೈತ ಮೇಟಿ ಕಣಿಮೆಪ್ಪ (71) ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ನಟ ಪುನೀತ್‌ ರಾಜಕುಮಾರ್‌ ಅವರಿಂದ ಪ್ರಭಾವಿತರಾಗಿದ್ದ ಕಣಿಮೆಪ್ಪ ಅವರು ಕೆಲ ದಿನಗಳ ಹಿಂದೆ ನೇತ್ರದಾನಕ್ಕೆ ಹೆಸರು ನೋಂದಣಿ ಮಾಡಿಸಿದ್ದರು. ಸೋಮವಾರ ಅವರು ನಿಧನರಾಗಿದ್ದು, ಅವರ ಪಾರ್ಥೀವ ಶರೀರವನ್ನು ಆಸ್ಪತ್ರೆಗೆ ಕೊಂಡೊಯ್ದು ಕಣ್ಣು ತೆಗೆದುಕೊಳ್ಳಲಾಗಿದೆ. ಕಣಿಮೆಪ್ಪ ಅವರ ಈ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಂಗಳವಾರ ಅವರನ್ನು ಅನೇಕರು ಹೊಗಳಿದ್ದಾರೆ.

ಮಂಗಳವಾರ ಅವರ ಅಂತ್ಯಕ್ರಿಯೆ ನಡೆಯಿತು. ಮೃತರಿಗೆ ಪತ್ನಿ, ಮೂವರು ಗಂಡು, ಹೆಣ್ಣು ಮಗಳಿದ್ದಾಳೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.