ಹೊಸಪೇಟೆ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ಬಣ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಿಂದ ಪ್ರಮುಖ ಮಾರ್ಗಗಳ ಮೂಲಕ ತಾಲ್ಲೂಕು ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ಬಳಿಕ ರಾಷ್ಟ್ರಪತಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿದರು.

ಬಂಡವಾಳಷಾಹಿಗಳು, ಕಾರ್ಪೊರೇಟ್‌ನವರಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರವು ರೈತರ ಹಿತ ಕಡೆಗಣಿಸಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಅಗತ್ಯ ವಸ್ತುಗಳ ಕಾಯ್ದೆಗೂ ತಿದ್ದುಪಡಿ ತಂದಿದ್ದು, ಎಲ್ಲ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಕಂಪನಿಗಳ ಕೈಗೆ ಕೊಟ್ಟಿದೆ. ದೇಶದ ಒಂದೊಂದೆ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಿದರು.

ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳಿಂದ ಬರುವ ದಿನಗಳಲ್ಲಿ ಆಹಾರ ಅಭದ್ರತೆ, ನಿರುದ್ಯೋಗ, ಕೃಷಿ ಬಿಕ್ಕಟ್ಟಿಗೆ ಕಾರಣವಾಗಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಹೀಗಾಗಿಯೇ ರೈತರು, ಕಾರ್ಮಿಕರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಕಾಯ್ದೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಇನ್ನಷ್ಟು ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ದೇವರಮನಿ ಮಹೇಶ, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಖಂಡರಾದ ಕೆ. ಪರಶುರಾಮಪ್ಪ, ಮುಖಂಡರಾದ ಖಾಜಾ ಹುಸೇನ್ ನಿಯಾಜಿ, ಎಂ. ಸೋಮಣ್ಣ, ಎಂ. ಜಡಿಯಪ್ಪ, ಎಂ. ಪ್ರಕಾಶ, ಎಚ್. ಶಬ್ಬೀರ್, ಮಹಾರಾಜ ದುರುಗಪ್ಪ, ಜೈರುದ್ದೀನ್, ಕೆ. ಧರ್ಮಸಾಗರ ಮಲ್ಲಿಕಾರ್ಜುನ, ೆ. ಷಣ್ಮುಖಪ್ಪ, ವಿ. ಗಾಳೆಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.