ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

Last Updated 8 ಸೆಪ್ಟೆಂಬರ್ 2022, 14:56 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ನಂಜುಂಡಸ್ವಾಮಿ ಬಣ) ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ ಸೇರಿದ ರೈತರು ರಸ್ತೆತಡೆ ಚಳವಳಿ ನಡೆಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅನಂತರ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿ, ಡಿ.ಸಿ. ಬರುವವರೆಗೆ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಪಿ. ಅವರಿಗೆ ಮನವಿ ಸಲ್ಲಿಸಿದರು.

ವಿದ್ಯುತ್‌ ಕ್ಷೇತ್ರದ ಖಾಸಗೀಕರಣ, ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುತ್ತಿರುವ ವಿಷಯ ತಿಳಿದು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಸಿ.ಎ. ಗಾಳೆಪ್ಪ, ಪ್ರಧಾನ ಕಾರ್ಯದರ್ಶಿ ನಾಗಯ್ಯ, ಗೌರವ ಅಧ್ಯಕ್ಷ ವೆಂಕೋಬಪ್ಪ, ಜಂಟಿ ಕಾರ್ಯದರ್ಶಿ ಗಂಗಾಧರ ಸ್ವಾಮಿ, ಮುಖಂಡರಾದ ಜೆ.ಎನ್‌. ಕಾಳಿದಾಸ್‌, ಗುಜ್ಜಲ್‌ ರಾಜು, ಸರಳ ಕಾವ್ಯ, ಸೋಮಪ್ಪ, ವೆಂಕಟೇಶ, ಮಹೇಶ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT