ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೌರ್ಜನ್ಯ ಪ್ರಕರಣ ಶೀರ್ಘ ಇತ್ಯರ್ಥಪಡಿಸಿ’

Last Updated 26 ಜುಲೈ 2021, 15:32 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಕಳೆದ ಮೂರು ವರ್ಷಗಳ ಅವಧಿಯಲ್ಲಿ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರು ಪೊಲೀಸ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸೋಮವಾರ ನಗರದಲ್ಲಿ ಜರುಗಿದ ಉಪವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕಾಲಕಾಲಕ್ಕೆ ಇತ್ಯರ್ಥಪಡಿಸಬೇಕು. ವಿನಾಕಾರಣ ಕಾಲಹರಣ ಮಾಡಬಾರದು’ ಎಂದು ಸೂಚಿಸಿದರು.

‘ಸ್ಥಳೀಯ ಸಂಸ್ಥೆವಾರು ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು. ಸಫಾಯಿ ಕರ್ಮಚಾರಿಗಳಿಗೆ ನಿವೇಶನ, ವಸತಿ ಸೌಲಭ್ಯ ಕಲ್ಪಿಸಬೇಕು’ ಎಂದು ಸೂಚಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳಿಗೆ ನೀಡಿದ ಸೌಲಭ್ಯ, ಪೌರ ಕಾರ್ಮಿಕರಿಗೆ ನೀಡಲಾಗುತ್ತಿರುವ ಕನಿಷ್ಠ ವೇತನ, ಇ.ಎಸ್.ಐ. ಮತ್ತು ಇ.ಪಿ.ಎಫ್. ಸೌಲಭ್ಯ, ಆರೋಗ್ಯ ತಪಾಸಣೆಯ ವಿವರ ಪಡೆದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತಕುಮಾರ, ಜಗದೀಶ, ಚೈಲ್ಡ್‌ಲೈನ್‌ ಸಂಸ್ಥೆಯ ಸಂಯೋಜಕ ಚಿದಾನಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT