ಮಂಗಳವಾರ, ಜೂನ್ 28, 2022
21 °C

ತಹಶೀಲ್ದಾರ್ ಕರ್ತವ್ಯಕ್ಕೆ ಅಡ್ಡಿ, 23. ಜನರ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಡೂರು: ತಾಲ್ಲೂಕಿನ ಅಂಕಮನಾಳ್ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದ ನಕಲಿ ವೈದ್ಯ ಹಾಗೂ ಆತ ಪರಾರಿಯಾಗಲು ಸಹಕರಿಸಿದ 23 ಮಂದಿ‌ ವಿರುದ್ಧ  ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ತಹಶೀಲ್ದಾರ್ ಎಚ್.ಜೆ.ರಶ್ಮಿಯವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.

ಅಧಿಕಾರಿಗಳು ಮನೆಯಲ್ಲೇ ಔಷಧಿ ನೀಡುತ್ತಿದ್ದ ಆಂಧ್ರಪ್ರದೇಶ ಮೂಲದ ನಕಲಿ ವೈದ್ಯ ಜಾಫರ್ ವಲಿ ಅವರನ್ನು ವಶಕ್ಕೆ ಪಡೆದಿದ್ದರು.

ಈ ಸಂದರ್ಭದಲ್ಲಿ ಕೆಲ ಗ್ರಾಮಸ್ಥರು ಗ್ರಾಮಲೆಕ್ಕಾಧಿಕಾರಿ ಸುಬ್ರಮಣಿಯವರನ್ನು ತಳ್ಳಾಡಿ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಕಲಿ ವೈದ್ಯ ತಪ್ಪಿಸಿಕೊಂಡು ಹೋಗಲು ಸಹಕರಿಸಿದ್ದರು.

ಹೀಗಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಕಲಿ ವೈದ್ಯ ಸೇರಿ ಒಟ್ಟು 23 ಜನರ ವಿರುದ್ಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಎಚ್.ಜೆ.ರಶ್ಮಿಮಂಗಳವಾರ ದೂರನ್ನು ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು