ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಮತ ಹಾಕಿ ಮದುವೆಯಾದರು

Last Updated 23 ಏಪ್ರಿಲ್ 2019, 12:47 IST
ಅಕ್ಷರ ಗಾತ್ರ

ಹೊಸಪೇಟೆ: ಮದುವೆಗೂ ಮುನ್ನ ವಧು ಟಿ. ರಮಾ ಅವರು ಮಂಗಳವಾರ ತಾಲ್ಲೂಕಿನ ಮಲಪನಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 219ಕ್ಕೆ ತೆರಳಿ ಹಕ್ಕು ಚಲಾಯಿಸಿದರು.

ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಅಯ್ಯನಹಳ್ಳಿಯಲ್ಲಿ ಮಂಗಳವಾರ ರಮಾ ಅವರ ಮದುವೆ ನಿಶ್ಚಯವಾಗಿತ್ತು. ಮದುವೆ ಮಂಟಪಕ್ಕೆ ತೆರಳುವುದಕ್ಕೂ ಮುನ್ನ ಮತಗಟ್ಟೆಗೆ ಬಂದು ಮತ ಹಾಕಿದರು. ನಂತರ ಕುಟುಂಬ ಸದಸ್ಯರೊಂದಿಗೆ ಮದುವೆ ಮನೆಗೆ ಪಯಣ ಬೆಳೆಸಿದರು.

‘ಐದು ವರ್ಷಕ್ಕೊಮ್ಮೆ ಚುನಾವಣೆ ಬರುತ್ತದೆ. ಅದರಲ್ಲಿ ಭಾಗವಹಿಸಿ, ಮತ ಹಾಕುವುದು ಎಲ್ಲರ ಕರ್ತವ್ಯ. ನಾನು ನನ್ನ ಹಕ್ಕನ್ನು ಚಲಾಯಿಸಿದ್ದೇನೆ’ ಎಂದು ರಮಾ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT