ಹೊಸಪೇಟೆ: ಮಾಜಿ ಸಚಿವ ಈಟಿ ಶಂಭುನಾಥ ವಿಧಿವಶ

7

ಹೊಸಪೇಟೆ: ಮಾಜಿ ಸಚಿವ ಈಟಿ ಶಂಭುನಾಥ ವಿಧಿವಶ

Published:
Updated:
Deccan Herald

ಹೊಸಪೇಟೆ: ಕರುಳು ಸಂಬಂಧಿ ಕಾಯಿಲೆಯಿಂದ ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿದ್ದ, ಮಾಜಿ ಸಚಿವ ಈಟಿ ಶಂಭುನಾಥ ಅವರು ಗುರುವಾರ ವಿಧಿವಶರಾಗಿದ್ದಾರೆ.

ಶಂಭುನಾಥ್ ಅವರಿಗೆ 77 ವರ್ಷ ವಯಸ್ಸಾಗಿತ್ತು. 1965ರಲ್ಲಿ ಬಿ.ಇ.ಸಿವಿಲ್ ಎಂಜಿನಿಯರಿಂಗ್ ಮುಗಿಸಿದ್ದರು. 1990ರಲ್ಲಿ ಬಂಗಾರಪ್ಪನವರ ಸರ್ಕಾರದಲ್ಲಿ ಅರಣ್ಯ ಖಾತೆ ಸಚಿವರಾಗಿದ್ದರು.

1989ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೂವಿನಹಡಗಲಿ ಕ್ಷೇತ್ರದಿಂದ ದಿವಂಗತ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ವಿರುದ್ದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

1992ರಲ್ಲಿ ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಕನಕ ಗುರು ಪೀಠ ಸ್ಥಾಪನೆಗೆ ಶ್ರಮಿಸಿದ್ದರು ಶ್ರಮಿಸಿದ್ದರು.

ಶುಕ್ರವಾರ ಮಧ್ಯಾಹ್ನ ಸ್ವಗ್ರಾಮ ಹೂವಿನಹಡಗಲಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !