ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಣೆಯಾದ ಬಾಲಕಿ ಶವವಾಗಿ ಪತ್ತೆ

ಅಪಹರಣ, ಅತ್ಯಾಚಾರ ಪ್ರಕರಣ ದಾಖಲು
Last Updated 9 ಸೆಪ್ಟೆಂಬರ್ 2019, 12:34 IST
ಅಕ್ಷರ ಗಾತ್ರ

ತೋರಣಗಲ್ಲು: ಇಲ್ಲಿಗೆ ಸಮೀಪದ ಗ್ರಾಮವೊಂದರಲ್ಲಿ ಭಾನುವಾರ ರಾತ್ರಿ ಕಾಣೆಯಾಗಿದ್ದ ಆರು ವರ್ಷದ ಬಾಲಕಿಯ ಮೃತದೇಹವು ಸೋಮವಾರ ಬೆಳಿಗ್ಗೆ ಅದೇ ಗ್ರಾಮದ ಆಟದ ಮೈದಾನದಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿದ್ದು, ಇಲ್ಲಿನ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಬೆಳಿಗ್ಗೆ 9ರ ವೇಳೆಗೆ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆಗೆ ಹೋದಾಗ, ಗೋಣಿ ಚೀಲದ ಹೊರಗೆ ಮಗುವಿನ ಕಾಲು ಕಂಡು ಇತರರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಮುಖದಲ್ಲಿ ದವಡೆಯ ಮೇಲೆ ಮತ್ತು ಕುತ್ತಿಗೆಯ ಭಾಗದಲ್ಲಿ ಪರಚಿದ ರಕ್ತ ಗಾಯಗಳಾಗಿದ್ದು, ಪರ್ಕ್ ಹೆಸರಿನ ಚಾಕೊಲೆಟ್ ಸಹ ಕಂಡುಬಂದಿದೆ.

ಗ್ರಾಮದ ಈಶ್ವರ ದೇವಸ್ಥಾನದ ಹತ್ತಿರ ರಾತ್ರಿ 8ರ ವೇಳೆಗೆ ಸ್ನೇಹಿತರ ಜೊತೆ ಆಟವಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದಾಳೆಎಂದು ತಂದೆ ತೋರಣಗಲ್‌ ಠಾಣೆಗೆ ದೂರು ನೀಡಿದ್ದರು.

ಪಿಎಸ್‍ಐ ಮಹೇಶಗೌಡ ಗ್ರಾಮಕ್ಕೆ ರಾತ್ರಿ ಭೇಟಿ ನೀಡಿ ಪಾಲಕರನ್ನು ವಿಚಾರಿಸಿ, ಪತ್ತೆ ಕಾರ್ಯಾಚರಣೆಯನ್ನು ನಡೆಸಿದ್ದರು. ಮೃತದೇಹ ಪತ್ತೆಯಾದ ಸ್ಥಳಕ್ಕೆ ಬಳ್ಳಾರಿಯಿಂದ ಶ್ವಾನದಳವನ್ನು ಕರೆಸಿ ಪರಿಶೀಲನೆ ನಡೆಸಲಾಯಿತು.

‘ಉದ್ಯೋಗದ ಸಲುವಾಗಿ ಗ್ರಾಮದಲ್ಲಿ ನೆಲೆಸಿರುವ ರಾಜ್ಯದವರಲ್ಲಿ ಕೆಲವರು ಪಾನಮತ್ತರಾಗಿ ರಾತ್ರಿ ಸಂಚರಿಸುತ್ತಿದ್ದಾರೆ. ಅವರೇ ಮಗುವನ್ನು ಕೊಂದಿರುವ ಸಾಧ್ಯತೆ ಇದೆ. ಗ್ರಾಮದಲ್ಲಿರುವ ಮದ್ಯದಂಗಡಿಯನ್ನು ಸ್ಥಳಾಂತರಿಸಬೇಕು. ಗ್ರಾಮಸ್ಥರಿಗೆ ರಕ್ಷಣೆ ಕೊಡಬೇಕು’ ಎಂದು ಮುಖಂಡ ಕಾಶಿ ತಿಪ್ಪೇಸ್ವಾಮಿ ಆಗ್ರಹಿಸಿದರು.

ಆರೋಪಿ ಪತ್ತೆ:ಪ್ರಕರಣ ಕುರಿತು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಕೆ.ಬಾಬ, ‘ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತನಿಖೆ ಮುಗಿದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT