ಭಾನುವಾರ, ನವೆಂಬರ್ 17, 2019
24 °C

ಚಿನ್ನದ ಸರ ಕಿತ್ತುಕೊಂಡು ಪರಾರಿ

Published:
Updated:

ಹೊಸಪೇಟೆ: ಭಾನುವಾರ ಸಂಜೆ ವಾಯುವಿಹಾರಕ್ಕೆ ಹೋಗುತ್ತಿದ್ದ ಇಲ್ಲಿನ ಚಪ್ಪರದಹಳ್ಳಿ ನಿವಾಸಿ ಗೀತಾ (53) ಎಂಬುವರ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ.

’ಎಂ.ಜೆ. ನಗರದ ಐದನೇ ಕ್ರಾಸ್‌ನಿಂದ ಗೀತಾ ಅವರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದಿದ್ದ ಸರಗಳ್ಳರಿಬ್ಬರೂ, ವಿಳಾಸ ಕೇಳುವ ನೆಪದಲ್ಲಿ ಮಾತನಾಡುತ್ತ ಅವರ ಕೊರಳಿಗೆ ಕೈ ಹಾಕಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಗೀತಾ ಅವರ ಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. 

ಇನ್ನಷ್ಟೇ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಿದೆ.

ಪ್ರತಿಕ್ರಿಯಿಸಿ (+)