ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ವಿರಾಮದ ನಂತರ ಗುಡುಗಿದ ಮಳೆ

Last Updated 7 ಜುಲೈ 2021, 12:11 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಎರಡು ವಾರಗಳ ವಿರಾಮದ ಬಳಿಕ ನಗರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಗುಡುಗಿದೆ.

ಮಂಗಳವಾರ ರಾತ್ರಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಇನ್ನು, ಹಡಗಲಿ ಪಟ್ಟಣದಲ್ಲಿ ಅನೇಕ ಮನೆಗಳು, ಸರ್ಕಾರಿ ಕಟ್ಟಡಗಳಲ್ಲಿ ನೀರು ಹೊಕ್ಕಿದೆ.

ತಾಲ್ಲೂಕಿನ ಮರಿಯಮ್ಮನಹಳ್ಳಿ, ಕಮಲಾಪುರ, ಹಂಪಿ, ಕಡ್ಡಿರಾಂಪುರ, ಧರ್ಮದಗುಡ್ಡ, ಕೂಡ್ಲಿಗಿ, ಕೊಟ್ಟೂರು ಹಾಗೂ ಹರಪನಹಳ್ಳಿಯಲ್ಲೂ ಉತ್ತಮ ಮಳೆಯಾಗಿದೆ. ಎಲ್ಲೆಡೆ ಉತ್ತಮ ಮಳೆಯಾಗಿರುವುದರಿಂದ ಬಹುತೇಕ ಕಡೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಅಡಿ ನಿರ್ಮಿಸಿರುವ ಬದು, ನಾಲಾ, ಚೆಕ್‌ ಡ್ಯಾಂಗಳು ಭರ್ತಿಯಾಗಿವೆ.

ಹಲವು ಕಡೆಗಳಲ್ಲಿ ಮಂಗಳವಾರ ಸಂಜೆ ಆರಂಭವಾದ ಗುಡುಗು ಸಹಿತ ಮಳೆ ತಡರಾತ್ರಿಯ ವರೆಗೆ ಸುರಿದಿದೆ. ಉತ್ತಮ ವರ್ಷಧಾರೆಯಿಂದಾಗಿ ಕುಂಠಿತಗೊಂಡಿದ್ದ ಕೃಷಿ ಚಟುವಟಿಕೆಗಳು ಪುನಃ ಬಿರುಸುಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT