ಶುಕ್ರವಾರ, ಏಪ್ರಿಲ್ 3, 2020
19 °C

ಹೊಸಪೇಟೆ: ಭಾರೀ ಮಳೆ; ಗೋಡೆ ಕುಸಿದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮರಿಯಮ್ಮನಹಳ್ಳಿ/ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿ ಮಳೆಯಾಗಿದ್ದು, ತಾಲ್ಲೂಕಿನ ಹನುಮನಹಳ್ಳಿಯಲ್ಲಿ ಮನೆಯ ಗೋಡೆ ಕುಸಿದು ದ್ಯಾಮಪ್ಪ (75) ಎಂಬುವರು ಸಾವನ್ನಪ್ಪಿದ್ದಾರೆ.

ರಾತ್ರಿಯಿಡೀ ಸುರಿದ ಮಳೆಗೆ ಗೋಡೆ ನೆನೆದು, ಬೆಳಗಿನ ಜಾವ ಕುಸಿದಿದ್ದು, ಮನೆಯಲ್ಲಿ ಮಲಗಿಕೊಂಡಿದ್ದ ದ್ಯಾಮಪ್ಪನವರ ಮೇಲೆ ಬಿದ್ದದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಸ್ಥಳಕ್ಕೆ ತಹಶೀಲ್ದಾರ್ ಎಚ್.ವಿಶ್ವನಾಥ್, ಗ್ರಾಮ ಲೆಕ್ಕಿಗರಾದ ಶಾರದಮ್ಮ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎನ್.ಮಂಜುನಾಥ್, ಪಿ.ಎಸ್‍.ಐ. ಎಂ.ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಸಂಜೆ ಜಿಟಿಜಿಟಿಯಾಗಿ ಸುರಿಯಲು ಆರಂಭಿಸಿದ ಮಳೆ ಮಂಗಳವಾರ ಬೆಳಿಗ್ಗೆ ಒಂಬತ್ತು ಗಂಟೆಯವರೆಗೆ ಎಡೆಬಿಡದೆ ಸುರಿದಿದೆ. ಕೆಲವೊಮ್ಮೆ ಜಿಟಿಜಿಟಿ, ಕೆಲವೊಮ್ಮೆ ಬಿರುಸಿನ ಮಳೆಯಾಗಿದ್ದರಿಂದ ನಗರದಲ್ಲಿನ ಚರಂಡಿಗಳು ಉಕ್ಕಿ ಹರಿದಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತುಕೊಂಡಿತ್ತು.

ತಾಲ್ಲೂಕಿನ ಗಾಳೆಮ್ಮನಗುಡಿಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ತೊಂದರೆ ಅನುಭವಿಸಿದರು. ತಾಲ್ಲೂಕಿನ ಹಂಪಿ, ಕಮಲಾಪುರ, ಸೀತಾರಾಮ ತಾಂಡ, ಬೈಲುವದ್ದಿಗೇರಿ, ಧರ್ಮಸಾಗರ, ರಾಮಸಾಗರ, ಕಾಕುಬಾಳು, ವಡ್ಡರಹಳ್ಳಿ, ಬಸವನದುರ್ಗ, ನಾಗೇನಹಳ್ಳಿ, ಹೊಸೂರು, ಕಾರಿಗನೂರು, ವ್ಯಾಸನಕೆರೆ, ಮರಿಯಮ್ಮನಹಳ್ಳಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು