ಸಾರಿಗೆ ಬಸ್‌ ಬಳಸುವಂತೆ ಜಾಗೃತಿ

7

ಸಾರಿಗೆ ಬಸ್‌ ಬಳಸುವಂತೆ ಜಾಗೃತಿ

Published:
Updated:
Prajavani

ಬಳ್ಳಾರಿ: ಸಂಚಾರ ದಟ್ಟಣೆಯನ್ನು ತಡೆಯಲು ಪ್ರಯಾಣಿಕರು ಖಾಸಗಿ ವಾಹನಗಳನ್ನು ತೊರೆದು ಹೆಚ್ಚಾಗಿ ಸರ್ಕಾರಿ ಬಸ್‌ಗಳನ್ನು ಬಳಸುವಂತೆ ಪ್ರೋತ್ಸಾಹಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಬುಧವಾರ ಅಧಿಕಾರಿಗಳು ಸಂಚರಿಸಿ ಜಾಗೃತಿ ಮೂಡಿಸಿದರು.

ನಗರದ ಎಸ್‌ಪಿ ವೃತ್ತದಿಂದ ಕನಕ ದುರ್ಗಮ್ಮ ದೇವಸ್ಥಾನದವರೆಗೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಉಪವಿಭಾಗಾಧಿಕಾರಿ ರಮೇಶ್ ಕೋನರೆಡ್ಡಿ, ಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ಎಸ್.ಆರ್.ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಬಸ್‌ನಲ್ಲಿ ಹಣ ನೀಡಿ ಟಿಕೆಟ್ ಪಡೆದು ಸಂಚರಿಸಿ ಒಳಗಿರುವ ಸುರಕ್ಷಿತ ಸೌಕರ್ಯಗಳನ್ನು ಪರಿಶೀಲಿಸಿದರು.

ಸಾರಿಗೆ ಸಂಸ್ಥೆಯಿಂದ ಪ್ರತಿ ತಿಂಗಳ ಮೊದಲನೇ ಬುಧವಾರ ಸರ್ಕಾರಿ ಬಸ್‌ಗಳಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಂಚರಿಸಿ ಸಾರ್ವಜನಿಕರಿಗೆ ಮಾದರಿಯಾಗುತ್ತಿದ್ದಾರೆ. ನಗರದಲ್ಲಿ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಎಲ್ಲರೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ಎಸ್.ಆರ್.ಚಂದ್ರಶೇಖರ್ ಹೇಳಿದರು.

ಇದರಿಂದ ನಗರದಸಂಚಾರ ದಟ್ಟಣೆ ಮತ್ತು ವಾಯುಮಾಲಿನ್ಯ ಮಟ್ಟ ಕಡಿಮೆಯಾಗಲಿದೆ. ಸರ್ಕಾರಿ ಬಸ್‌ಗಳ ಪ್ರಯಾಣ ಸುರಕ್ಷಿತ ಎನ್ನುವ ಸಂದೇಶ ಸಾರುವ ಉದ್ದೇಶದಿಂದ ಸಂಸ್ಥೆಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !