ಸೋಮವಾರ, ಜನವರಿ 24, 2022
29 °C

ಅಂಗನವಾಡಿ ಕೇಂದ್ರ ಮುಚ್ಚುವ ಹುನ್ನಾರ- ಕೆ. ನಾಗರತ್ನಮ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ಹೊಸ ಶಿಕ್ಷಣ ನೀತಿ ಜಾರಿಗೆ ತರುವುದರ ಮೂಲಕ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಕೆ. ನಾಗರತ್ನಮ್ಮ ಆರೋಪಿಸಿದರು.

‘ಹೊಸ ಶಿಕ್ಷಣ ನೀತಿ ಅನ್ವಯ ಅಂಗನವಾಡಿ ಕೇಂದ್ರಗಳಲ್ಲಿ 3 ರಿಂದ 4 ವರ್ಷದ ಮಕ್ಕಳು ಮಾತ್ರ ಕಲಿಕೆಗೆ ಅವಕಾಶ ಇರುತ್ತದೆ. ಅದನ್ನು ಜಾರಿಗೆ ತಂದರೆ ಅಂಗನವಾಡಿಗಳನ್ನು ಮುಚ್ಚಬೇಕಾಗುತ್ತದೆ’ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ನೂತನ ಶಿಕ್ಷಣ ನೀತಿ ಜಾರಿಗೆ ಬಂದರೆ ಅಂಗನವಾಡಿಗೆ ಮಕ್ಕಳು ಸೇರುವ ಸಂಖ್ಯೆ ಸಂಪೂರ್ಣ ಕಡಿಮೆಯಾಗುತ್ತದೆ. ಬಾಲವಟಿಕಾ ಎಂಬ ಶಿಶುಪಾಲನಾ ಕೇಂದ್ರದಿಂದ ಅಂಗನವಾಡಿ ನೌಕರರಿಗೆ ಸಂಕಷ್ಟ ಎದುರಾಗುತ್ತದೆ. ಅವರು ಬೀದಿಗೆ ಬೀಳಬೇಕಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಹಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಶಿಕ್ಷಣ ನೀಡಬೇಕು. ಅಂಗನವಾಡಿ ನೌಕರರನ್ನು ಐ.ಸಿ.ಡಿ.ಎಸ್‌ನ ಐದು ಉದ್ದೇಶಗಳಿಗೆ ಮಾತ್ರ ನಿಯೋಜಿಸಬೇಕು. ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಜ. 10ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದ್ದು, ರಾಜ್ಯದ ಎಲ್ಲ ಅಂಗನವಾಡಿ ನೌಕರರು ಪಾಲ್ಗೊಳ್ಳುವರು. ಕೋವಿಡ್‌ ಲಾಕ್‌ಡೌನ್‌ ಹೆಸರಿನಲ್ಲಿ ಸರ್ಕಾರ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದೆ’ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಆರ್.ಭಾಸ್ಕರ್ ರೆಡ್ಡಿ, ಅಂಗನವಾಡಿ ನೌಕರರ ಸಂಘದ ಕೆ.ಎಂ.ಸ್ವಪ್ನ, ಈರಮ್ಮ, ಶಕುಂತಲಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು