ಗುಜ್ಜಲ್‌ ನಿಂಗಪ್ಪ ನಗರಸಭೆ ನೂತನ ಅಧ್ಯಕ್ಷ

7
ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ

ಗುಜ್ಜಲ್‌ ನಿಂಗಪ್ಪ ನಗರಸಭೆ ನೂತನ ಅಧ್ಯಕ್ಷ

Published:
Updated:
Deccan Herald

ಹೊಸಪೇಟೆ: ಇಲ್ಲಿನ ನಗರಸಭೆ ನೂತನ ಅಧ್ಯಕ್ಷರಾಗಿ ಗುಜ್ಜಲ್‌ ನಿಂಗಪ್ಪ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕಾಗಿ ಮಧ್ಯಾಹ್ನ 12 ಗಂಟೆ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇತ್ತು. ನಿಂಗಪ್ಪ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿರಲಿಲ್ಲ.

ಮಧ್ಯಾಹ್ನ 1ಕ್ಕೆ ಚುನಾವಣಾಧಿಕಾರಿ ಗಾರ್ಗಿ ಜೈನ್‌ ಅವರು ನಗರಸಭೆ ಸಭಾಂಗಣಕ್ಕೆ ಬಂದು, ನಿಂಗಪ್ಪ ಅವರ ಎಲ್ಲ ದಾಖಲೆಗಳು ಕ್ರಮಬದ್ಧವಾಗಿವೆ. ಅವರನ್ನು ಬಿಟ್ಟರೆ ಯಾರು ನಾಮಪತ್ರ ಸಲ್ಲಿಸಿಲ್ಲ. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಪೌರಾಯುಕ್ತ ವಿ. ರಮೇಶ್‌ ಇದ್ದರು.

ನಿಂಗಪ್ಪ ಅವರು 32ನೇ ವಾರ್ಡ್‌ ಪ್ರತಿನಿಧಿಸುತ್ತಾರೆ. 35 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ 20 ಸದಸ್ಯರನ್ನು ಹೊಂದಿದೆ. ನಗರಸಭೆ ಅವಧಿ ಮುಗಿಯಲು ಇನ್ನೂ ಎಂಟು ತಿಂಗಳು ಬಾಕಿ ಉಳಿದಿದೆ. ಪಕ್ಷದಲ್ಲಿನ ಆಂತರಿಕ ಒಪ್ಪಂದದಂತೆ ಇಲ್ಲಿಯವರೆಗೆ ನಿಂಗಪ್ಪ ಸೇರಿದಂತೆ ಒಟ್ಟು ಐದು ಜನ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದಾರೆ. ಈ ಹಿಂದಿನ ಅಧ್ಯಕ್ಷೆ ಕೆ. ನಾಗಲಕ್ಷ್ಮ್ಮ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಸಂಭ್ರಮ:  ಗುಜ್ಜಲ್‌ ನಿಂಗಪ್ಪ ಅವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ನಗರಸಭೆ ಕಚೇರಿ ಮುಂಭಾಗದ ಮುಖ್ಯರಸ್ತೆಯಲ್ಲೇ ಪಟಾಕಿ ಸಿಡಿಸಿ, ಅವರ ಬೆಂಬಲಿಗರು ಸಂಭ್ರಮಿಸಿದರು. ಇದರಿಂದಾಗಿ ಸುಮಾರು 15 ನಿಮಿಷ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಎಲ್ಲೆಡೆ ಕಪ್ಪು ದೂಳು ಆವರಿಸಿಕೊಂಡಿತ್ತು. ಸಭಾಂಗಣದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರು, ನಗರಸಭೆ ಸದಸ್ಯರು ಹಾಗೂ ಅವರ ಬೆಂಬಲಿಗರು ಹೂಮಾಲೆ ಹಾಕಿ, ಸಿಹಿ ತಿನ್ನಿಸಿ ಶುಭ ಕೋರಿದರು.

ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ, ಕಾಂಗ್ರೆಸ್‌ ಮುಖಂಡರಾದ ಸಂದೀಪ್‌ ಸಿಂಗ್‌, ನಿಂಬಗಲ್‌ ರಾಮಕೃಷ್ಣ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !