ಭಾನುವಾರ, ಸೆಪ್ಟೆಂಬರ್ 19, 2021
25 °C

ಹಂಪಿ ರುದ್ರಭೂಮಿಯಲ್ಲಿ ಕೋವಿಡ್‌ ಮೃತರ ಶವ ಹೂಳದಂತೆ ಗ್ರಾಮಸ್ಥರ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ‘ಕೋವಿಡ್‌–19ನಿಂದ ಮೃತಪಟ್ಟವರ ಶವಗಳನ್ನು ತಾಲ್ಲೂಕಿನ ಹಂಪಿ ರುದ್ರಭೂಮಿಯಲ್ಲಿ ಹೂಳಲು ಅವಕಾಶ ಕಲ್ಪಿಸಬಾರದು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಹಂಪಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ಒಂದುವೇಳೆ ಕೋವಿಡ್‌ನಿಂದ ನಿಧನ ಹೊಂದಿದವರ ಅಂತ್ಯಸಂಸ್ಕಾರ ಹಂಪಿಯಲ್ಲೇ ಮಾಡುವುದೇ ಆದರೆ ಶವಗಳನ್ನು ಸುಡಬೇಕು. ಆದರೆ, ಯಾವುದೇ ಕಾರಣಕ್ಕೂ ಹೂಳಬಾರದು’ ಎಂದು ಒತ್ತಾಯಿಸಿದ್ದಾರೆ.

ಗ್ರಾಮಸ್ಥರಾದ ಸಂದೇಶ, ಸುರೇಶ, ಸಿದ್ದಪ್ಪ, ರಮೇಶ, ರಾಜೇಶ, ಪರಶುರಾಮ ಮೊದಲಾದವರು ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು