ಶನಿವಾರ, ಅಕ್ಟೋಬರ್ 24, 2020
23 °C

ಹೊಸಪೇಟೆ: ಸತತ ಮಳೆಗೆ ಕುಸಿದು ಬಿದ್ದ ಹಂಪಿ ಮಂಟಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಸತತವಾಗಿ ಸುರಿಯುತ್ತಿರುವ ಮಳೆಗೆ ತಾಲ್ಲೂಕಿನ ಹಂಪಿ ‘ಎದುರು ಬಸವಣ್ಣ’ ಮಂಟಪದ ಕಲ್ಲುಗಳು ಭಾನುವಾರ ಕುಸಿದು ಬಿದ್ದಿವೆ.

‘ಇತ್ತೀಚಿನ ಕೆಲವು ದಿನಗಳಿಂದ ಮೇಲಿಂದ ಮೇಲೆ ಮಳೆ ಬರುತ್ತಿದ್ದು, ಮಳೆ ನೀರಿಗೆ ಗೋಡೆ ನೆನೆದು ಮಂಟಪದ ಕಲ್ಲುಗಳು ಬಿದ್ದಿರುವ ಸಾಧ್ಯತೆ ಇದೆ. ಈ ಹಿಂದೆಯೂ ಈ ಮಂಟಪದ ಕಲ್ಲುಗಳು ಬಿದ್ದಿವೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್‌ ಪಿ. ಕಾಳಿಮುತ್ತು ತಿಳಿಸಿದ್ದಾರೆ.

ಸತತ ಮಳೆ: ಬಳ್ಳಾರಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಆರಂಭಗೊಂಡ ಜಿಟಿಜಿಟಿ ಮಳೆ ಭಾನುವಾರ ದಿನವಿಡೀ ಸುರಿದಿದೆ. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು