ಹಂಪಿ ಸ್ಮಾರಕಗಳು ಮುಳುಗಡೆ

7
ತುಂಗಭದ್ರೆಯಿಂದ 79 ಸಾವಿರ ಕ್ಯುಸೆಕ್‌ ನೀರು ನದಿಗೆ

ಹಂಪಿ ಸ್ಮಾರಕಗಳು ಮುಳುಗಡೆ

Published:
Updated:
Deccan Herald

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದಿಂದ 79 ಸಾವಿರ ಕ್ಯುಸೆಕ್‌ಗೂ ಅಧಿಕ ನೀರು ನದಿಗೆ ಬಿಟ್ಟಿರುವುದರಿಂದ ತಾಲ್ಲೂಕಿನ ಹಂಪಿಯ ಕೆಲ ಸ್ಮಾರಕಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿವೆ.

ವಿಜಯನಗರ ಕಾಲದ ಕಾಲು ಸೇತುವೆ, ಚಕ್ರತೀರ್ಥ, ಪಿತೃಪಿಂಡ ಪ್ರಧಾನ ಮಂಟಪ, ಸ್ನಾನಘಟ್ಟದ ಮೆಟ್ಟಿಲುಗಳು, ಪುರಂದರ ಮಂಟಪ ಹಾಗೂ ರಾಮ–ಲಕ್ಷ್ಮಣ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಜಲಾವೃತವಾಗಿದೆ. ಇದರಿಂದಾಗಿ ಪ್ರವಾಸಿಗರು ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಲು ಆಗುತ್ತಿಲ್ಲ. ನದಿ ತುಂಬಿ ಹರಿಯುತ್ತಿರುವುದರಿಂದ ಮೋಟಾರ್‌ ದೋಣಿ ಹಾಗೂ ತೆಪ್ಪ ಸಂಚಾರ ಸ್ಥಗಿತಗೊಂಡಿದೆ.

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ 1,631.76 ಅಡಿ ನೀರು ಸಂಗ್ರಹಗೊಂಡಿದ್ದು, 71,670 ಕ್ಯುಸೆಕ್‌ ಒಳಹರಿವು ಇದ್ದರೆ, 79,399 ಕ್ಯುಸೆಕ್‌ ಹೊರಹರಿವು ಭಾನುವಾರ ದಾಖಲಾಗಿದೆ. ಬೆಳಿಗ್ಗೆ ಎಂಟು ಗಂಟೆಯ ವರೆಗೆ 1ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹೊರಬಿಡಲಾಗುತ್ತಿತ್ತು. ಮಧ್ಯಾಹ್ನ 12 ಗಂಟೆಯ ಬಳಿಕ 79,399 ಕ್ಯುಸೆಕ್‌ಗೆ ತಗ್ಗಿದೆ. ಒಟ್ಟು 33 ಕ್ರಸ್ಟ್‌ಗೇಟ್‌ಗಳ ಪೈಕಿ 22 ಗೇಟ್‌ಗಳನ್ನು ಅರ್ಧ ಅಡಿಗಳವರೆಗೆ ತೆಗೆದು ನೀರು ಹರಿಸಲಾಗುತ್ತಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !