ಹಂಪಿಯಲ್ಲಿ ನಿಯಮ ಮೀರಿ ಫೋಟೊ ಶೂಟ್ ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸಪೇಟೆ: ಹಂಪಿಯ ಸಂರಕ್ಷಿತ ಸ್ಮಾರಕದೊಳಗೆ ನಿಯಮ ಮೀರಿ ಫೋಟೊ ಶೂಟ್ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಹಂಪಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣ ಸೇನೆ ಅಧ್ಯಕ್ಷ ವಿಶ್ವನಾಥ ಮಾಳಗಿ ಅವರು ಸೋಮವಾರ ನೀಡಿದ ದೂರಿನ ಮೇರೆಗೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘ಹಂಪಿ: ನಿಯಮ ಮೀರಿ ಫೋಟೊ ಶೂಟ್’ ಶೀರ್ಷಿಕೆ ಅಡಿ ನ. 23ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.
‘ನಿಯಮಗಳನ್ನು ಉಲ್ಲಂಘಿಸಿ ಹಂಪಿಯ ವಿಜಯ ವಿಠಲ ದೇವಸ್ಥಾನ, ಕಮಲ ಮಹಲ್, ಮಹಾನವಮಿ ದಿಬ್ಬ ಸಮೀಪದ ಪುಷ್ಕರಣಿಯಲ್ಲಿ ವಿವಾಹಪೂರ್ವ ಫೋಟೊ ಶೂಟ್ ನಡೆಸಲಾಗಿದೆ. ವಿಜಯಿ ಶ್ಯಾಮ ಮತ್ತು ಕಂಪನಿ, ಜಾಹ್ನವಿ ರೆಡ್ಡಿ, ಸಿದ್ಧಾಂತ್, ಮಹಿಮ್, ಸುಮನ್ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಇದರಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಮಾಳಗಿ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.