ಭಾನುವಾರ, ಜನವರಿ 17, 2021
28 °C

ವಿಜಯನಗರ ಜಿಲ್ಲೆ ರಚನೆ; ಅಂತಿಮ ಅಧಿಸೂಚನೆಗೆ ಹಂಪಿ ಸ್ವಾಮೀಜಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ವಿಜಯನಗರ ಜಿಲ್ಲೆ ರಚನೆ ಸಂಬಂಧ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಬೇಕೆಂದು ಹಂಪಿ ಹೇಮಕೂಟ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.

ಈ ಸಂಬಂಧ ಬುಧವಾರ ಅವರು ನಗರದಲ್ಲಿ ಪಾದಯಾತ್ರೆ ನಡೆಸಿ, ಬಳಿಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.

‘ಚಾರಿತ್ರಿಕವಾಗಿ ವಿಜಯನಗರ ಕಾಲವನ್ನು ದಕ್ಷಿಣ ಭಾರತದ ಸುವರ್ಣಯುಗ ಎಂದು ಕರೆಯಲಾಗುತ್ತದೆ. ಅದರ ಹೆಸರಿನಲ್ಲಿ ಜಿಲ್ಲೆ ರಚನೆ ಮಾಡುವುದು ಸೂಕ್ತ. ಇದರಿಂದ ಪಶ್ಚಿಮ ತಾಲ್ಲೂಕುಗಳ ಜನರಿಗೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.

‘ಆಡಳಿತದ ಅನುಕೂಲಕ್ಕಾಗಿ ಈ ಹಿಂದೆಯೇ ಕೊಪ್ಪಳ, ಗದಗ, ಹಾವೇರಿ, ದಾವಣಗೆರೆ ಸೇರಿದಂತೆ ಇತರೆ ಜಿಲ್ಲೆಗಳನ್ನು ರಚಿಸಲಾಗಿದೆ. ಅದೇ ರೀತಿ ವಿಜಯನಗರ ಜಿಲ್ಲೆಯಾದರೆ ಬಳ್ಳಾರಿ ಜಿಲ್ಲಾ ಕೇಂದ್ರದಿಂದ ಬಹಳ ದೂರದಲ್ಲಿರುವ ಗ್ರಾಮಗಳ ಜನರಿಗೆ ಅನುಕೂಲವಾಗುತ್ತದೆ. ಜನರ ಹಿತಕ್ಕಾಗಿ ಆದಷ್ಟು ಶೀಘ್ರ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದರು.

ವಿಜಯನಗರ ಜಿಲ್ಲಾ ಹೋರಾಟ ಸಮಿತಿಯ ಮುಖಂಡರಾದ ವೈ.ಯಮುನೇಶ್, ಗುಜ್ಜಲ ನಾಗರಾಜ್, ನಿಂಬಗಲ್ ರಾಮಕೃಷ್ಣ, ಹನುಮಂತಪ್ಪ, ವೆಂಕಟೇಶ್, ಸಣ್ಣ ಮಾರೆಪ್ಪ, ರಮೇಶ್, ವಿಶ್ವನಾಥ ಕೌತಾಳ್, ಅಗಳಿ ಬಾಸ್ಕರ್, ಕೊಳಗದ ಕೀರ್ತಿ, ಆಂಜನೇಯಲು, ಪರಗಿ ಶ್ರೀಶೈಲ, ಸತೀಶ, ಕೊಳಗದ ವೆಂಕಟೇಶ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು