ಮಂಗಳವಾರ, ಮೇ 18, 2021
24 °C

ಹಂಪಿಗೆ ಪ್ರವಾಸಿಗರ ದಂಡು: ಸಂಚಾರ ಅಸ್ತವ್ಯಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ತಾಲ್ಲೂಕಿನ ಹಂಪಿಗೆ ಭಾನುವಾರ ಪ್ರವಾಸಿಗರ ದಂಡೇ ಹರಿದು ಬಂದದ್ದರಿಂದ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ರಜಾ ದಿನವಾಗಿದ್ದರಿಂದ ದೂರದ ಊರುಗಳಿಂದ ಪ್ರವಾಸಿಗರು, ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ಬಂದಿದ್ದರು. ಬಸ್ಸು, ಜೀಪು, ಕಾರುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದರು. ವಿಜಯ ವಿಠಲ ದೇಗುಲಕ್ಕೆ ಹೋಗುವ ಕಿರಿದಾದ ಮಾರ್ಗದಲ್ಲಿ ಎದುರು–ಬದುರಾಗಿ ವಾಹನಗಳು ಬಂದು ಸಂಪೂರ್ಣ ಸಂಚಾರ ಸ್ತಬ್ಧಗೊಂಡಿತ್ತು. ವಾಹನ ಸಂಚಾರ ಸುಗಮಗೊಳ್ಳಲು ಎರಡು ಗಂಟೆಗೂ ಅಧಿಕ ಸಮಯ ಹಿಡಿಯಿತು.

ಕಂಪ್ಲಿ ಮುಖ್ಯರಸ್ತೆಯಿಂದ ತಳವಾರಘಟ್ಟಕ್ಕೆ ಹೋಗುವ ಮಾರ್ಗದಲ್ಲಿ ಈ ಹಿಂದೆ ಸಂಚಾರ ಪೊಲೀಸರು ನಿಂತು, ಭಾರಿ ವಾಹನಗಳನ್ನು ತಡೆಯುತ್ತಿದ್ದರು. ಆ ವಾಹನಗಳು ವೆಂಕಟಾಪುರ ಮಾರ್ಗವಾಗಿ ವಿಜಯ ವಿಠಲ ದೇಗುಲಕ್ಕೆ ಹೋಗುತ್ತಿದ್ದವು. ಭಾನುವಾರ ಪೊಲೀಸರು ಇರದ ಕಾರಣ ಎಲ್ಲಾ ವಾಹನಗಳು ಯಾವುದೇ ಅಡೆತಡೆಯಿಲ್ಲದೆ ಹೋಗಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು