ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಉತ್ಸವ ಆಚರಣೆ: ಮಾ.2,3ರಂದು

ಕಾರ್ಯಕಾರಿ ಸಮಿತಿ ಸಭೆ ಇಂದು
Last Updated 6 ಫೆಬ್ರುವರಿ 2019, 14:43 IST
ಅಕ್ಷರ ಗಾತ್ರ

ಬಳ್ಳಾರಿ: ಹಂಪಿ ಉತ್ಸವವನ್ನು ಮಾರ್ಚ್‌ 2 ಮತ್ತು 3ರಂದು ಎರಡು ದಿನಗಳ ಕಾಲ ಸರಳವಾಗಿ ಆಚರಿಸಲು ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಡಿ.ಕೆ.ಶಿವಕುಮಾರ್ ಅವರು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್‌ಪ್ರಸಾದ್ ಮನೋಹರ್ ತಿಳಿಸಿದ್ದಾರೆ.

ಹಂಪಿ ಉತ್ಸವಕ್ಕೆ ಸಂಬಂಧಿಸಿದ ಎಲ್ಲ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಳ್ಳುತ್ತಿದೆ. ಫೆ.7ರಂದು ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿದ್ದತಾ ಸಭೆ ಕರೆಯಲಾಗಿದ್ದು, ಸಂಬಂಧಿಸಿದ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅವರಿಗೆ ಅಗತ್ಯ ನಿರ್ದೇಶನ ನೀಡಿ ಅಚ್ಚುಕಟ್ಟಾಗಿ ಜನರ ಉತ್ಸವವನ್ನಾಗಿ ಹಂಪಿ ಉತ್ಸವವನ್ನು ಆಚರಿಸಲಾಗುವುದುಎಂದು ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಕೊನೆಗೂ ಮಣಿದ ಸರ್ಕಾರ:ಕಲಾವಿದರ ಮತ್ತು ವಿವಿಧ ಸಂಘಟನೆಗಳ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹಂಪಿ ಉತ್ಸವ ಆಚರಣೆಯ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಫೆ.7ರಂದು ಕಾರ್ಯಕಾರಿ ಸಮಿತಿ ಸಭೆ ನಡೆಸುವಂತೆ ಸರ್ಕಾರ ಜಿಲ್ಲಾಡಳಿತಕ್ಕೆ ಆದೇಶ ಹೊರಡಿಸಿದೆ.

ಫೆ.7ರಂದು ನಡೆಯುವ ಸಭೆಯಲ್ಲಿ ಹಂಪಿ ಉತ್ಸವದ ಆಚರಣೆಯ ಕುರಿತು ಸಿದ್ಧತೆಗಳಬಗ್ಗೆಚರ್ಚೆ ನಡೆಸಲಾಗುತ್ತದೆ.ಮೂರು ತಿಂಗಳಿನಿಂದ ಹಂಪಿ ಉತ್ಸವ ಆಚರಣೆಯನ್ನು ಮುಂದೂಡುತ್ತಾ ಬಂದಿದ್ದ ರಾಜ್ಯ ಸರ್ಕಾರ ಇದೀಗ ಜಿಲ್ಲೆಯ ಜನತೆ, ಕಲಾವಿದರ, ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದು ಉತ್ಸವ ಆಚರಣೆಗೆ ಮುಂದಾಗಿರುವುದು ಗಣಿ ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.

ಕಳೆದ 2018ರ ನವೆಂಬರ್ ಮೊದಲ 3,4,5 ರಂದು ಪ್ರತಿ ವರ್ಷದಂತೆ ನಡೆಯಬೇಕಿದ್ದ ಉತ್ಸವವನ್ನು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರಿಂದ ತೆರವಾಗಿದ್ದ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಅಂದಿನಿಂದ ಹಲವಾರು ಕನ್ನಡಪರ ಸಂಘಟನೆಗಳು ಮತ್ತು ಕಲಾವಿದರು ಅನೇಕ ಹೋರಾಟಗಳನ್ನು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT