ಶನಿವಾರ, ನವೆಂಬರ್ 28, 2020
17 °C

ಮೆರವಣಿಗೆ, ತುಂಗಾ ಆರತಿಗೆ ಸೀಮಿತ: 13ರಂದು ‘ಹಂಪಿ ಉತ್ಸವ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಬಳ್ಳಾರಿ ಜಿಲ್ಲಾಡಳಿತವು ನ. 13ರಂದು ಒಂದೇ ದಿನ ‘ಹಂಪಿ ಉತ್ಸವ’ ಆಚರಿಸಲು ಬುಧವಾರ ತೀರ್ಮಾನಿಸಿದೆ.

ನ. 13ರಂದು ಸಂಜೆ ಹಂಪಿ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷ ದೇಗುಲದ ವರೆಗೆ ಮೆರವಣಿಗೆ ನಡೆಯಲಿದೆ. ಜಂಬೂ ಸವಾರಿ ಮಾದರಿಯಲ್ಲಿ ಅಲಂಕರಿಸಿದ ಆನೆಗಳ ಮೆರವಣಿಗೆ ಜರುಗಲಿದೆ. ಜಿಲ್ಲೆಯ ಪ್ರತಿ ತಾಲ್ಲೂಕಿನ ಎರಡು ಕಲಾ ತಂಡಗಳು ಪಾಲ್ಗೊಳ್ಳಲಿವೆ. ಮೆರವಣಿಗೆ ಮುಗಿದ ನಂತರ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿಯೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

‘ನ.13ಕ್ಕೆ ಹಂಪಿ ಉತ್ಸವ’ದ ದಿನಾಂಕ ನಿಗದಿಯಾಗಿದೆ. ಗುರುವಾರ ಅಥವಾ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರು ಅಧಿಕೃತವಾಗಿ ದಿನಾಂಕ ಘೋಷಿಸುವರು’ ಎಂದು ಹೆಸರು ಹೇಳಲಿಚ್ಛಿಸಿದ ಹಿರಿಯ ಅಧಿಕಾರಿ ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.

ಪ್ರತಿ ವರ್ಷದಂತೆ ಮೂರು ದಿನ ‘ಹಂಪಿ ಉತ್ಸವ’ ಆಚರಿಸಬೇಕೆಂದು ಜಿಲ್ಲೆಯ ಹಲವು ಸಂಘಟನೆಗಳು ಆಗ್ರಹಿಸಿದ್ದವು. ಆದರೆ, ಕೋವಿಡ್‌–19 ಕಾರಣಕ್ಕಾಗಿ ಜಿಲ್ಲಾಡಳಿತ ಒಂದು ದಿನ ಸಾಂಕೇತಿಕವಾಗಿ ಕಾರ್ಯಕ್ರಮ ಆಚರಿಸಲು ತೀರ್ಮಾನ ತೆಗೆದುಕೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು