ಶುಕ್ರವಾರ, ನವೆಂಬರ್ 27, 2020
19 °C
ಕೋವಿಡ್‌ ಮಾರ್ಗಸೂಚಿ ಪ್ರಕಾರ ಹಂಪಿ ಉತ್ಸವ

ನ. 13ಕ್ಕೆ ಶೋಭಾಯಾತ್ರೆ, ತುಂಗಾ ಆರತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ವಿಜಯನಗರ ವೈಭವ ಸಾರುವ ‘ಹಂಪಿ ಉತ್ಸವ’ವನ್ನು ಈ ಸಲ ಜಿಲ್ಲಾಡಳಿತವು ಕೋವಿಡ್‌ ಮಾರ್ಗಸೂಚಿ ಪ್ರಕಾರ ಸರಳವಾಗಿ ಆಚರಿಸಲು ತೀರ್ಮಾನಿಸಿದ್ದು, ಕಾರ್ಯಕ್ರಮವು ಒಂದೇ ದಿನಕ್ಕೆ ಸೀಮಿತವಾಗಿರಲಿದೆ.

ನ. 13ರಂದು ಸಂಜೆ 4ಕ್ಕೆ ಹಂಪಿ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಉತ್ಸವಕ್ಕೆ ಚಾಲನೆ ನೀಡುವರು. ಜಿಲ್ಲೆಯ ಎಲ್ಲ ತಾಲ್ಲೂಕುಗಳ ಜಾನಪದ ಕಲಾತಂಡಗಳ ಪ್ರದರ್ಶನದೊಂದಿಗೆ ಶೋಭಾಯಾತ್ರೆ ಜರುಗಲಿದೆ.

ಮೆರವಣಿಗೆಯು ವಿರೂಪಾಕ್ಷೇಶ್ವರ ದೇವಸ್ಥಾನ ತಲುಪಿದ ನಂತರ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಸಂಜೆ 7ಕ್ಕೆ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ, ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್‌ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು