ಸೋಮವಾರ, ಅಕ್ಟೋಬರ್ 26, 2020
23 °C

ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಗುರುವಾರ ಭಾರಿ ಕುಸಿತ ಕಂಡಿದೆ.

41,052 ಕ್ಯುಸೆಕ್‌ ಒಳಹರಿವು ಇದ್ದರೆ, 46,053 ಕ್ಯುಸೆಕ್‌ ಹೊರಹರಿವು ದಾಖಲಾಗಿದೆ. ಹತ್ತು ಕ್ರಸ್ಟ್‌ಗೇಟ್‌ಗಳ ಮೂಲಕ ನದಿಗೆ 30,000 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ.

ಬುಧವಾರ 89,132 ಕ್ಯುಸೆಕ್‌ ಒಳಹರಿವು, 87,148 ಕ್ಯುಸೆಕ್‌ ಹೊರಹರಿವು ಇತ್ತು. ತುಂಗಾ ಮತ್ತು ಭದ್ರಾ ಜಲಾಶಯದ ಹೊರಹರಿವು ತಗ್ಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ನಿಂತಿರುವುದರಿಂದ ಒಳಹರಿವು ಸಹಜವಾಗಿಯೇ ಕುಸಿದಿದೆ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಎಂಜಿನಿಯರ್‌ ವಿಶ್ವನಾಥ್‌ ತಿಳಿಸಿದ್ದಾರೆ. 

ನದಿಯಲ್ಲಿ ನೀರಿನ ಹರಿವು ಇಳಿಮುಖಗೊಂಡಿರುವುದರಿಂದ ಮುಳುಗಡೆಯಾಗಿದ್ದ ಹಂಪಿಯ ಸ್ಮಾರಕಗಳು ಸಹಜ ಸ್ಥಿತಿಗೆ ಬರುತ್ತಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು