ಭಾನುವಾರ, ಜೂನ್ 13, 2021
28 °C

ಹೊಸಪೇಟೆಯಲ್ಲಿ ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಸಿನ ಮಳೆಯಾಗಿದೆ.

ಸಂಜೆ ನಾಲ್ಕು ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಸಂಜೆ 5.30ರ ವರೆಗೆ ನಿರಂತರವಾಗಿ ಸುರಿದಿದೆ. ಬೆಳಿಗ್ಗೆ ಹತ್ತು ಗಂಟೆಯ ವರೆಗೆ ಬಿಸಿಲಿತ್ತು. ಬಳಿಕ ದಟ್ಟ ಕಾರ್ಮೋಡ ಆವರಿಸಿಕೊಂಡು ವಾತಾವರಣ ಸಂಪೂರ್ಣ ತಂಪಾಯಿತು. ಸಂಜೆ ಬಿರುಗಾಳಿಯೊಂದಿಗೆ ಆರಂಭವಾದ ಬಿರುಸಿನ ಮಳೆ ವಾತಾವರಣ ಮತ್ತಷ್ಟು ತಂಪುಗೊಳಿಸಿತು.

ತಾಲ್ಲೂಕಿನ ಹಂಪಿ, ಕಡ್ಡಿರಾಂಪುರ, ಕಮಲಾಪುರ, ತಳವಾರಘಟ್ಟ, ಕಾಳಘಟ್ಟ, ಇಪ್ಪಿತ್ತೇರಿ ಮಾಗಾಣಿ, ಹೊಸೂರು, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ವ್ಯಾಸನಕೆರೆ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು