ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯದ ಅಂಗಳದಲ್ಲಿ ಹೂಳಿನ ಜಾತ್ರೆ ಎರಡನೇ ದಿನಕ್ಕೆ

Last Updated 31 ಮೇ 2019, 12:22 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಅಂಗಳದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಹೂಳಿನ ಜಾತ್ರೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿರಿಸಿತು.

ಮೂರು ಜೆ.ಸಿ.ಬಿ. ಯಂತ್ರಗಳ ಸಹಾಯದಿಂದ ಹೂಳು ತೆಗೆದು, 30 ಟ್ರ್ಯಾಕ್ಟರ್‌ಗಳಲ್ಲಿ ರೈತರು ಹೊಲಗಳಿಗೆ ಕೊಂಡೊಯ್ದರು. ಕಣಿವೆ ವೀರಭದ್ರೇಶ್ವರ ದೇಗುಲಕ್ಕೆ ಹೊಂದಿಕೊಂಡಿರುವ ಮಾರ್ಗದ ಎರಡೂ ಕಡೆಗಳಲ್ಲಿಯೂ ಮಣ್ಣು ಸುರಿಯಲಾಯಿತು.

ಗದುಗಿನ ವೀರೇಶ್ವರ ಪುಣ್ಯಾಶ್ರಮದ ಕಲ್ಲಜ್ಜಯ್ಯ ಸ್ವಾಮೀಜಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು. ‘ಮೂರು ರಾಜ್ಯಗಳ ಲಕ್ಷಾಂತರ ಜನರಿಗೆ ನೀರುಣಿಸುವ ತುಂಗಭದ್ರೆಯ ಒಡಲಿನಿಂದ ಹೂಳು ತೆಗೆಸುವುದು ಅತ್ಯಗತ್ಯ. ಅದಕ್ಕೆ ಎಲ್ಲರೂ ಕೈಜೋಡಿಸಬೇಕು. ಈ ವಿಷಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು’ ಎಂದು ಹೇಳಿದರು.

ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT