ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ ಸಮುದಾಯ ಆರೋಗ್ಯ ಅಧಿಕಾರಿ ಸಾವು

Last Updated 18 ಆಗಸ್ಟ್ 2020, 12:44 IST
ಅಕ್ಷರ ಗಾತ್ರ

ಹೊಸಪೇಟೆ: ನಗರದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯ ಅಧಿಕಾರಿ ಜಯಪ್ಪ (32) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

‘ಕೂಡ್ಲಿಗಿ ತಾಲ್ಲೂಕಿನ ಬಡೇಲಡಕು ಗ್ರಾಮದ ಜಯಪ್ಪ ಅವರು ಸೋಮವಾರ ರಾತ್ರಿ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ಮಂಗಳವಾರ ನಸುಕಿನ ಜಾವ ಐದು ಗಂಟೆಗೆ ಕೊನೆಯುಸಿರೆಳೆದಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಜಯಪ್ಪ ಅವರು ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಶನ್‌ ಯೋಜನೆಯಡಿ ಹೊರಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಸಿಕ ವೇತನ ಹೊರತುಪಡಿಸಿ ಉದ್ಯೋಗ ಭದ್ರತೆ ಇರಲಿಲ್ಲ. ಸರ್ಕಾರ ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಕೊಡಬೇಕು. ಕೋವಿಡ್‌ ಸಂಕಷ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಆರೋಗ್ಯ ಅಧಿಕಾರಿಗಳಿಗೆ ಸೇವಾ ಭದ್ರತೆ ಕಲ್ಪಿಸಿ ಕನಿಷ್ಠ ₹1 ಕೋಟಿ ವಿಮೆ ಜಾರಿಗೆ ತರಬೇಕು’ ಎಂದು ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘ ಅಧ್ಯಕ್ಷ ಬೀರೇಂದ್ರ ಕೇಶವ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT