ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ ಸುತ್ತಮುತ್ತ ವರ್ಷಧಾರೆ

Last Updated 5 ಆಗಸ್ಟ್ 2021, 13:09 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ.

ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮೋಡ ಕವಿದ ವಾತಾವರಣ ಇತ್ತು. ತಂಗಾಳಿ ಬೀಸುತ್ತಿತ್ತು. ಮಧ್ಯಾಹ್ನ ದಟ್ಟ ಕಾರ್ಮೋಡ ಕವಿದು ಮಳೆಯಾಯಿತು. ಬಳಿಕ ಸ್ವಲ್ಪ ಬಿಡುವು ಕೊಟ್ಟ ಮಳೆ ಮತ್ತೆ ಸಂಜೆ ಸುರಿಯಿತು. ಬಳಿಕ ಬಿಟ್ಟು ಬಿಟ್ಟು ಮಳೆಯಾಯಿತು. ಮೇಲಿಂದ ಮೇಲೆ ಮಳೆಯಾಗಿದ್ದರಿಂದ ವಾತಾವರಣ ಸಂಪೂರ್ಣ ತಂಪಾಯಿತು.

ತಾಲ್ಲೂಕಿನ ಹೊಸೂರು, ಇಪ್ಪಿತ್ತೇರಿ ಮಾಗಾಣಿ, ಕಮಲಾಪುರ, ಹಂಪಿ, ಧರ್ಮದಗುಡ್ಡ, ನಾಗೇನಹಳ್ಳಿ, ಬಸವನದುರ್ಗ ಸೇರಿದಂತೆ ಹಲವೆಡೆ ಮಳೆಯಾಗಿದೆ. ಪ್ರವಾಸಿಗರು ಮಳೆಯಲ್ಲೇ ನೆನೆದುಕೊಂಡು ಹಂಪಿ ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT