ಶುಕ್ರವಾರ, ಮಾರ್ಚ್ 5, 2021
30 °C

ಹೊಸಪೇಟೆ: ನಾಲ್ಕು ಕಡೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಇಲ್ಲಿನ ಉಪ ನೋಂದಣಾಧಿಕಾರಿ ಪ್ರಭಾಕರ ಮಠದ್‌ ಅವರ ಮನೆ, ಕಚೇರಿ, ಫಾರ್ಮ್‌ ಹೌಸ್‌ ಸೇರಿದಂತೆ ನಾಲ್ಕು ಕಡೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ನಗರದ ತಾಲ್ಲೂಕು ಕಚೇರಿಯಲ್ಲಿನ ಉಪನೋಂದಣಾಧಿಕಾರಿ ಕಚೇರಿ, ಬಸವೇಶ್ವರ ಬಡಾವಣೆಯಲ್ಲಿನ ಪ್ರಭಾಕರ ಅವರ ಮನೆ, ಕೂಡ್ಲಿಗಿಯಲ್ಲಿನ ಅವರ ಮಾವನ ಮನೆ ಹಾಗೂ ಕೂಡ್ಲಿಗಿಯ ವೀರಾಪುರದ ಫಾರ್ಮ್‌ ಹೌಸ್‌ ಮೇಲೆ ಎಸಿಬಿ ಎಸ್ಪಿ ಗುರುನಾಥ್‌ ಬಿ. ಮತ್ತೂರ್‌ ನೇತೃತ್ವದ ನಾಲ್ಕು ಪ್ರತ್ಯೇಕ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ. ನಾಲ್ಕೂ ಕಡೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 

ಅಕ್ರಮ ಆಸ್ತಿ ಗಳಿಕೆ ಹಾಗೂ ಆಸ್ತಿ ನೋಂದಣಿಯಲ್ಲಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು