ಬುಧವಾರ, ನವೆಂಬರ್ 25, 2020
20 °C

ಹೊಸಪೇಟೆ: ಸಚಿವ ಆನಂದ್ ಸಿಂಗ್ ಬಂಗ್ಲೆ ಬಳಿ ಕಾಣಿಸಿಕೊಂಡ ಮೊಸಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಇಲ್ಲಿನ ವರ್ತುಲ ರಸ್ತೆಯಲ್ಲಿರುವ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಬಂಗ್ಲೆ ಬಳಿ ಬುಧವಾರ ನಸುಕಿನ ಜಾವ ಮೊಸಳೆ ಕಾಣಿಸಿಕೊಂಡಿದೆ.

ಮೊಸಳೆ ಕಂಡ ಅಲ್ಲಿನ ಸಿಬ್ಬಂದಿ ತಕ್ಷಣವೇ ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ಅದನ್ನು ಹಿಡಿದು, ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಬಿಟ್ಟರು.

ಸಚಿವರ ಬಂಗ್ಲೆ ಸಮೀಪ ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆ ಇದೆ. ಕಾಲುವೆ ಮೂಲಕ ಮೊಸಳೆ ಬಂಗ್ಲೆ ಸಮೀಪ ಬಂದಿರಬಹುದು ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು