ಗುರುವಾರ , ಅಕ್ಟೋಬರ್ 1, 2020
24 °C

ಒಳಹರಿವು ಹೆಚ್ಚಳ: ತುಂಗಭದ್ರಾ ನದಿಗೆ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಶನಿವಾರ 12 ಕ್ರಸ್ಟ್‌ ಗೇಟ್‌ಗಳನ್ನು ತೆಗೆದು ನದಿಗೆ ನೀರು ಹರಿಸಲಾಗುತ್ತಿದೆ.

12 ಕ್ರಸ್ಟ್‌ಗೇಟ್‌ಗಳನ್ನು ತಲಾ ಒಂದುವರೆ ಅಡಿ ಮೇಲಕ್ಕೆತ್ತಿ 36,000 ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಕಾಲುವೆಗಳಿಗೆ 9,000 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ.

ಅಣೆಕಟ್ಟೆಗೆ ಒಟ್ಟು 35,000 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 1,632.94 ಅಡಿ ನೀರಿನ ಸಂಗ್ರಹವಿದೆ.

‘ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ತುಂಗಾ ಜಲಾಶಯದಿಂದ ನೀರು ಹರಿಸಲಾಗುತ್ತಿದ್ದು, ಒಳಹರಿವು ಹೆಚ್ಚಾಗಿದೆ. ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರಬೇಕು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು