ಬುಧವಾರ, ಜೂನ್ 16, 2021
23 °C

ಹೊಸಪೇಟೆ: ಅಸ್ಪೃಶ್ಯ ಸಮುದಾಯದವರಿಂದ ಪತ್ರ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹೊಸಪೇಟೆ: ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ನಗರದ ಅಂಚೆ ಕಚೇರಿ ಎದುರು ಪತ್ರ ಚಳವಳಿ ನಡೆಸಿದರು.

ಬಳಿಕ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಎರಡು ಸಾವಿರ ಮನವಿ ಪತ್ರಗಳನ್ನು ಅಂಚೆ ಪೆಟ್ಟಿಗೆಯೊಳಗೆ ಹಾಕಿ, ಘೋಷಣೆಗಳನ್ನು ಕೂಗಿದರು.

ಸ್ಪೃಶ್ಯ ಜಾತಿಗಳಾದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ. ನ್ಯಾಯಾಲಯದ ತೀರ್ಪನ್ನು ಗೌರವಿಸಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಮುಖಂಡರಾದ ಎಂ.ಸಿ. ವೀರಸ್ವಾಮಿ, ನಿಂಬಗಲ್‌ ರಾಮಕೃಷ್ಣ, ಬಣ್ಣದಮನೆ ಸೋಮಶೇಖರ್‌, ಗ್ಯಾನಪ್ಪ ಬಡಿಗೇರ್‌, ಶಿವಕುಮಾರ ಗಂಗಪ್ಪ, ಕೊಟಗಿನಹಾಳು ಮಲ್ಲಿಕಾರ್ಜುನ, ಬಿ. ಮಾರೆಣ್ಣ, ಶೇಷು, ಭರತ್‌ ಕುಮಾರ್‌, ಶೇಕ್ಷಾವಲಿ, ನಾಗರಾಜ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು