ಹೊಸಪೇಟೆ: ಬೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಆಗ್ರಹಿಸಿ ಅಸ್ಪೃಶ್ಯ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ನಗರದ ರಾಣಿಪೇಟೆಯಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮನೆ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.

ಮೀಸಲಾತಿಯ ಪ್ರಯೋಜನ ಸ್ಪೃಶ್ಯ ಜಾತಿಗಳಿಗೆ ಸಿಗುತ್ತಿರುವುದರಿಂದ ಅಸ್ಪೃಶ್ಯ ಜಾತಿಗಳವರಿಗೆ ಅನ್ಯಾಯವಾಗುತ್ತಿದೆ. ಈ ವಿಷಯವನ್ನು ನ್ಯಾಯಾಲಯ ಕೂಡ ಹೇಳಿದೆ. ಹೀಗಿರುವಾಗ ಅದನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದು ಅಸ್ಪೃಶ್ಯ ಜಾತಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಮೂಲ ಅಸ್ಪೃಶ್ಯ ಜಾತಿಗಳ ಮೀಸಲು ಪ್ರಮಾಣವನ್ನು ಶೇ 15ರಿಂದ 20ಕ್ಕೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಒಕ್ಕೂಟದ ಮುಖಂಡರಾದ ಸೋಮೇಶಖರ್ ಬಣ್ಣದಮನೆ, ಸಣ್ಣ ಈರಪ್ಪ, ನಿಂಬಗಲ್ ರಾಮಕೃಷ್ಣ, ಮಲ್ಲಿಕಾರ್ಜುನ ಕಮಲಾಪುರ, ಎಚ್.ವೆಂಕಟೇಶ್, ಎಚ್.ಸಿ.ರವಿ, ನೀಲಕಂಠ, ಪ್ರಕಾಶ್, ಆನಂದ್, ರಾಮಚಂದ್ರಬಾಬು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.