ಮಂಗಳವಾರ, ಅಕ್ಟೋಬರ್ 27, 2020
19 °C

ಹೊಸಪೇಟೆ: ರಾತ್ರಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಮಳೆ‌ ಬಿಟ್ಟು ಬಿಡದೆ ಸುರಿಯುತ್ತಿದೆ.

ರಾತ್ರಿ ಹತ್ತು ಗಂಟೆಗೆ ಆರಂಭಗೊಂಡ ಜಿಟಿಜಿಟಿ ಮಳೆ ಶನಿವಾರ ನಸುಕಿನ ಜಾವದ ವರೆಗೆ ಸುರಿಯಿತು. ಬಳಿಕ ಕೆಲಕಾಲ ಬಿರುಸಾಗಿ ಸುರಿದ ಮಳೆ ಮತ್ತೆ ಜಿಟಿಜಿಟಿಯಾಗಿ ಬೀಳುತ್ತಿದೆ.

ಬಿಡುವು ಕೊಡದೆ ಮಳೆ ಸುರಿಯುತ್ತಿರುವ ಕಾರಣ ಶನಿವಾರ ಬೆಳಿಗ್ಗೆ ದೈನಂದಿನ ಕೆಲಸಕ್ಕೆ ಹೋಗುವವರಿಗೆ ತೊಂದರೆಯಾಯಿತು. ಕೆಲವರು ಮಳೆಯಲ್ಲೇ ನೆನೆದುಕೊಂಡು ಹೋದರು. ಮತ್ತೆ ಕೆಲವರು ಕೊಡೆಗಳನ್ನು ಆಶ್ರಯಿಸಿಕೊಂಡು ಹೆಜ್ಜೆ ಹಾಕಿದರು.

ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಪ್ರಮುಖ ರಸ್ತೆಗಳಲ್ಲಿ ಜನಸಂಚಾರ ವಿರಳವಾಗಿದೆ. ಪಟೇಲ್ ನಗರ, ಬಸವೇಶ್ವರ ಬಡಾವಣೆ, ವಿನಾಯಕ‌ನಗರ, ಚಿತ್ತವಾಡ್ಗಿ ಸೇರಿದಂತೆ ಹಲವೆಡೆ ರಸ್ತೆ ಮೇಲೆ‌ನೀರು ಸಂಗ್ರಹಗೊಂಡಿದೆ.

ತಾಲ್ಲೂಕಿನ ಹಂಪಿ, ಕಮಲಾಪುರ, ಕಡ್ಡಿರಾಂಪುರ, ಹೊಸೂರು, ಬಸವನದುರ್ಗ, ನಾಗೇನಹಳ್ಳಿ, ಇಪ್ಪಿತ್ತೇರಿ ಮಾಗಾಣಿ, ಮರಿಯಮ್ಮನಹಳ್ಳಿ, ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಸೇರಿದಂತೆ ಹಲವೆಡೆ ಮಳೆಯಾಗಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು