ಶುಕ್ರವಾರ, ಜೂನ್ 18, 2021
20 °C
ಕಾರ್ಯನಿರ್ವಾಹಕ ಅಧಿಕಾರಿ ಸೇರಿ ಎಂಟು ಜನಕ್ಕೆ ಕೋವಿಡ್‌

ಹೊಸಪೇಟೆ: ಎಂಟು ಜನರಿಗೆ ಕೋವಿಡ್‌; ತಾಲ್ಲೂಕು ಪಂಚಾಯಿತಿ ಕಚೇರಿ ಸೀಲ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ ತಾಲ್ಲೂಕು ಪಂಚಾಯಿತಿ

ಹೊಸಪೇಟೆ: ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಎಂಟು ಜನ ಸಿಬ್ಬಂದಿಯಲ್ಲಿ ಕೋವಿಡ್‌–19 ದೃಢಪಟ್ಟಿರುವುದರಿಂದ ನಗರದ ಸಂಡೂರು ರಸ್ತೆಯಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯನ್ನು ಸೋಮವಾರ ಸೀಲ್‌ಡೌನ್‌ ಮಾಡಲಾಗಿದೆ.

‘ಮೂರು ದಿನಗಳ ಹಿಂದೆ ಇಒ ಆರ್‌.ಕೆ. ಶ್ರೀಕುಮಾರ ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಬಳಿಕ 26 ಜನ ಸಿಬ್ಬಂದಿಗೆ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಎಂಟು ಜನಕ್ಕೆ ಕೋವಿಡ್‌ ಇರುವುದು ಸೋಮವಾರ ಗೊತ್ತಾಗಿದೆ. ಹಾಗಾಗಿ ಸೋಮವಾರ ಆರೋಗ್ಯ ಇಲಾಖೆಯ ಸಿಬ್ಬಂದಿ ಬಂದು ಕಚೇರಿ ಸೀಲ್‌ಡೌನ್‌ ಮಾಡಿದ್ದಾರೆ’ ಎಂದು ಸಹಾಯಕ ನಿರ್ದೇಶಕ ಎಂ. ಉಮೇಶ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಒಂದು ವಾರ ಯಾರು ಕೂಡ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬರುವುದು ಬೇಡ. ಬಳಿಕ ಸೀಮಿತ ಸಿಬ್ಬಂದಿಯೊಂದಿಗೆ ಕೆಲಸ ನಿರ್ವಹಿಸಲಾಗುವುದು. ಸಾರ್ವಜನಿಕರು ತೀರ ಅಗತ್ಯವಿದ್ದಲ್ಲಿ ಮಾತ್ರ ಕಚೇರಿಗೆ ಬರಬೇಕು’ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು