ಶುಕ್ರವಾರ, ಜೂನ್ 18, 2021
20 °C
ಹೊಸಪೇಟೆ

10 ಕ್ರಸ್ಟ್‌ಗೇಟ್‌ಗಳಿಂದ ತುಂಗಭದ್ರಾ ನದಿಗೆ ನೀರು; 1 ಲಕ್ಷ ಕ್ಯುಸೆಕ್ ಹೊರ ಹರಿವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದ 10 ಕ್ರಸ್ಟ್‌ಗೇಟ್‌ಗಳನ್ನು ತೆಗೆದು ನದಿಗೆ ನೀರು ಹರಿಸುತ್ತಿರುವುದು

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿರುವುದರಿಂದ ಸೋಮವಾರ ಹತ್ತು ಕ್ರಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ.

10 ಕ್ರಸ್ಟ್‌ಗೇಟ್‌ಗಳನ್ನು ತಲಾ ಎರಡು ಅಡಿ ಮೇಲಕ್ಕೆತ್ತಿ 32,288 ಕ್ಯುಸೆಕ್‌ ನೀರು ನದಿಗೆ ಬಿಡಲಾಗುತ್ತಿದೆ. 10,000 ಕ್ಯುಸೆಕ್‌ ನೀರು ಕಾಲುವೆಗಳಿಗೆ ಹರಿಸಲಾಗುತ್ತಿದೆ. ಭಾನುವಾರ ಸಂಜೆ ಮೂರು ಕ್ರಸ್ಟ್‌ಗೇಟ್‌ಗಳನ್ನು ತಲಾ ಒಂದು ಅಡಿ ಮೇಲೆ ತೆಗೆದು ಒಟ್ಟು 6,594 ಕ್ಯುಸೆಕ್‌ ನೀರು ಹರಿಸಲಾಗಿತ್ತು.

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,632.48 ಅಡಿ ನೀರಿನ ಸಂಗ್ರಹವಿದೆ. 28,933 ಕ್ಯುಸೆಕ್‌ ಒಳಹರಿವು ಇದೆ.

‘ಶಿವಮೊಗ್ಗದ ತುಂಗಾ ಜಲಾಶಯದ ಹೊರಹರಿವು ತಗ್ಗಿದರೂ ಜಲಾನಯನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಜಲಾಶಯ ತುಂಬಿರುವುದರಿಂದ ನದಿಗೆ ನೀರು ಹರಿಸಲಾಗುತ್ತಿದೆ. ಹಂತ ಹಂತವಾಗಿ ನದಿಗೆ 50,000ದಿಂದ 1,00,000 ಕ್ಯುಸೆಕ್‌ ವರೆಗೆ ನೀರು ಹರಿಸಲಾಗುವುದು. ಯಾರು ಕೂಡ ನದಿ ಪಾತ್ರಕ್ಕೆ ಇಳಿಯಬಾರದು’ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು