ಶನಿವಾರ, ಜನವರಿ 16, 2021
22 °C

ಹೊಸಪೇಟೆ: 22 ಕೆರೆ ತುಂಬಿಸುವ ಯೋಜನೆಗೆ ಸಿ.ಎಂ. ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಪಿನಾಯಕನಹಳ್ಳಿ (ಹೊಸಪೇಟೆ ತಾಲ್ಲೂಕು): ತಾಲ್ಲೂಕಿನ ಹತ್ತು ಗ್ರಾಮಗಳ ವ್ಯಾಪ್ತಿಗೆ ಬರುವ 22 ಕೆರೆಗಳಿಗೆ ನೀರು ತುಂಬಿಸುವ ₹243.35 ಕೋಟಿ ಮೊತ್ತದ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುರುವಾರ ಸಂಜೆ ವರ್ಚುವಲ್‌ ಉದ್ಘಾಟನೆ ನೆರವೇರಿಸಿದರು.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ, ‘ತುಂಗಭದ್ರಾ ನದಿ ಮೂಲಕ 22 ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರುವುದಾಗಿ ವಿಜಯನಗರ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಭರವಸೆ ಕೊಟ್ಟಿದ್ದೆ. ಕೊಟ್ಟ ಮಾತಿನಂತೆ ಯೋಜನೆ ಅನುಷ್ಠಾನಕ್ಕೆ ತರುತ್ತಿದ್ದೇನೆ’ ಎಂದು ಹೇಳಿದರು.
‘ಕೋವಿಡ್‌ ಸಂಕಷ್ಟದ ನಡುವೆಯೂ ಸರ್ಕಾರ ಅಭಿವೃದ್ಧಿ ಕುಂಠಿತವಾಗದಂತೆ ಕೆಲಸ ಮಾಡುತ್ತಿದೆ. ಈ ನಾಡಿನ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ. ಆದ್ಯತೆ ಮೇರೆಗೆ ನೀರಾವರಿ ಸೌಲಭ್ಯಗಳನ್ನು ಜಾರಿಗೆ ತರಲಾಗುತ್ತಿದೆ’ ಎಂದು ತಿಳಿಸಿದರು.

‘ಹೊಸಪೇಟೆ ತಾಲ್ಲೂಕಿನ ಪಾಪಿನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು ಗಣಿಗಾರಿಕೆಯಿಂದ ಬಾಧಿತವಾಗಿವೆ. ಅಭಿವೃದ್ಧಿಯಲ್ಲೂ ಅತಿ ಹಿಂದುಳಿದಿವೆ. ಈ ಭಾಗದ ಕೆರೆಗಳನ್ನು ತುಂಬಿಸಿ, ಅಂತರ್ಜಲ ವೃದ್ಧಿಸಲು ಈ ನೀರಾವರಿ ಯೋಜನೆ ಸಹಾಯಕವಾಗಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು