ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗಿ ಬಂದೋಬಸ್ತ್‌ನಲ್ಲಿ ಕಾರ್ಯಾಚರಣೆ: 21 ಅನಧಿಕೃತ ಮಳಿಗೆ ತೆರವು

Last Updated 13 ಜುಲೈ 2020, 9:49 IST
ಅಕ್ಷರ ಗಾತ್ರ

ಹೊಸಪೇಟೆ: ಇಲ್ಲಿನ ಮೂರಂಗಡಿ ವೃತ್ತದಲ್ಲಿನ ದರ್ಗಾ ಮಸೀದಿಯ 21 ಮಳಿಗೆಗಳ ತೆರವು ಕಾರ್ಯಾಚರಣೆ ಸೋಮವಾರ ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ನಡೆಯಿತು.

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ, ನಗರದಲ್ಲಿನ ಧಾರ್ಮಿಕ ಕಟ್ಟಡಗಳ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ನಗರಸಭೆ ಫೆಬ್ರುವರಿಯಲ್ಲಿ ಕೈಗೆತ್ತಿಕೊಂಡಿತ್ತು. ಅಂದೇ ಮಸೀದಿಯ ಮಳಿಗೆಗಳನ್ನು ತೆರವುಗೊಳಿಸಲು ಮುಂದಾಗಿತ್ತು. ಆದರೆ, ದರ್ಗಾ ಮಸೀದಿ ಸಮಿತಿಯಯವರು, ‘ಸ್ವಯಂಪ್ರೇರಣೆಯಿಂದ ಮಳಿಗೆಗಳನ್ನು ತೆರವುಗೊಳಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದರಿಂದ ಕಾರ್ಯಾಚರಣೆ ಕೈಬಿಡಲಾಗಿತ್ತು.

ನಂತರ ಲಾಕ್‌ಡೌನ್‌ನಿಂದ ನನೆಗುದಿಗೆ ಬಿದ್ದಿತ್ತು. ದರ್ಗಾ ಮಸೀದಿ ಸಮಿತಿಯವರು ತೆರವುಗೊಳಿಸದ ಕಾರಣ ಸೋಮವಾರ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಳತೆ ಮಾಡಿ ಕಟ್ಟಡಗಳನ್ನು ತೆರವುಗೊಳಿಸುತ್ತಿದೆ.

‘ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಮಸೀದಿಗೆ ಹೊಂದಿಕೊಂಡಿರುವ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲಾಗುತ್ತಿದೆ. ನಿರ್ದಿಷ್ಟ ಗಡುವಿನೊಳಗೆ ತೆರವು ಕಾರ್ಯಾಚರಣೆ ಮುಗಿಸಬೇಕೆಂದು ನ್ಯಾಯಾಲಯವೇ ನಿರ್ದೇಶನ ಕೊಟ್ಟಿದೆ. ಅದರ ಪ್ರಕಾರ ಕ್ರಮ ಜರುಗಿಸಲಾಗಿದೆ’ ಎಂದು ಉಪವಿಭಾಗಾಧಿಕಾರಿ ಶೇಕ್‌ ತನ್ವೀರ್‌ ಆಸಿಫ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT