ಗುರುವಾರ , ಜೂನ್ 24, 2021
25 °C

ಹೊಸಪೇಟೆ: ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಪಿಯುಸಿ ಮತ್ತು ಪದವಿ ಪ್ರವೇಶ ಶುಲ್ಕ ಹೆಚ್ಚಿಸಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

‘ಪಿಯುಸಿ, ಪದವಿ ಪ್ರವೇಶಕ್ಕೆ ಸರ್ಕಾರ ಈಗಾಗಲೇ ಶುಲ್ಕ ನಿಗದಿಪಡಿಸಿದೆ. ಹೀಗಿದ್ದರೂ ಖಾಸಗಿ ಕಾಲೇಜುಗಳು ಹೆಚ್ಚಿನ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುತ್ತಿವೆ. ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಮನಬಂದಂತೆ ವರ್ತಿಸುತ್ತಿರುವ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ಕೊರೊನಾ ಲಾಕ್‌ಡೌನ್‌ನಿಂದ ಬಡವರು, ಮಧ್ಯಮ ವರ್ಗದವರು, ರೈತರು ಬಹಳ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಮೇಲೆ ಹೆಚ್ಚಿನ ಹೊರೆ ಬೀಳಬಾರದು ಎಂಬ ಕಾರಣಕ್ಕಾಗಿ ಸರ್ಕಾರ ಶುಲ್ಕ ನಿಗದಿಪಡಿಸಿದೆ. ಆದರೆ, ಅದಕ್ಕೆ ಖಾಸಗಿ ಕಾಲೇಜುಗಳು ಕಿಮ್ಮತ್ತು ಕೊಡುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಫೆಡರೇಶನ್‌ ತಾಲ್ಲೂಕು ಅಧ್ಯಕ್ಷ ಜೆ. ಶಿವಕುಮಾರ, ಕಾರ್ಯದರ್ಶಿ ಎಚ್‌.ಎಂ. ಮಾರುತಿ, ಇ. ಗಣೇಶ್‌ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು