ಭಾನುವಾರ, ಜುಲೈ 25, 2021
27 °C

ಹೊಸಪೇಟೆಯಲ್ಲಿ ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಭಾನುವಾರ ಮಧ್ಯಾಹ್ನ ಬಿರುಸಿನ ಮಳೆಯಾಗಿದೆ.

ಮಧ್ಯಾಹ್ನ ಎರಡುವರೆ ಗಂಟೆ ಸುಮಾರಿಗೆ ಆರಂಭಗೊಂಡ ಬಿರುಸಾದ ಮಳೆ ಸತತ ಅರ್ಧಗಂಟೆಗೂ ಹೆಚ್ಚು ಸಮಯ ಸುರಿಯಿತು.

ರಭಸದ ಮಳೆಗೆ ಪಟೇಲ್‌ ನಗರ, ಚಿತ್ತವಾಡ್ಗಿ ಸೇರಿದಂತೆ ಹಲವೆಡೆ ಚರಂಡಿಗಳು ಉಕ್ಕಿ ಹರಿದವು. ಅಲ್ಲಲ್ಲಿ ರಸ್ತೆ ಮೇಲೆ ನೀರು ಸಹ ನಿಂತುಕೊಂಡಿತ್ತು. ಬೆಳಿಗ್ಗೆಯಿಂದ ದಟ್ಟ ಕಾರ್ಮೋಡ ಇತ್ತು. ಬಿರುಗಾಳಿ ಬೀಸುತ್ತಿತ್ತು. ಮಧ್ಯಾಹ್ನ ಏಕಾಏಕಿ ಭಾರಿ ಮಳೆಯಾಗಿದೆ. ವರ್ಷಧಾರೆಯಿಂದ ವಾತಾವರಣ ಸಂಪೂರ್ಣ ತಂಪಾಗಿದೆ.

ತಾಲ್ಲೂಕಿನ ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ಕಾಳಘಟ್ಟ, ಹೊಸೂರು, ಮಲಪನಗುಡಿ, ಕೊಂಡನಾಯಕನಹಳ್ಳಿ, ಹಂಪಿ, ಕಮಲಾಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು