ಆಸ್ಪತ್ರೆ ಬಂದ್ಗೆ ಮಿಶ್ರ ಪ್ರತಿಕ್ರಿಯೆ

ಹೊಸಪೇಟೆ: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಅಲೋಪಥಿ ವೈದ್ಯರು ಶುಕ್ರವಾರ ಕರೆ ನೀಡಿದ್ದ ಹೊರರೋಗಿ ವಿಭಾಗ (ಒಪಿಡಿ) ಸೇವೆ ಬಂದ್ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಎಂದಿನಂತೆ ಒಳ ಮತ್ತು ಹೊರರೋಗಿ ವಿಭಾಗಗಳಲ್ಲಿ ವೈದ್ಯರು, ರೋಗಿಗಳ ಆರೋಗ್ಯ ತಪಾಸಣೆ ಮಾಡಿದರು. ಮತ್ತೆ ಕೆಲವು ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ ಸಂಪೂರ್ಣ ಬಂದ್ ಇತ್ತು. ಇದರಿಂದಾಗಿ ರೋಗಿಗಳು, ಅದರಲ್ಲೂ ಗ್ರಾಮೀಣ ಪ್ರದೇಶದ ಜನ ತೊಂದರೆ ಅನುಭವಿಸಿದರು. ತುರ್ತು ಚಿಕಿತ್ಸೆ ಎಂದಿನಂತೆ ಇತ್ತು. ಬೆರಳೆಣಿಕೆಯಷ್ಟು ಮೆಡಿಕಲ್ಗಳಷ್ಟೇ ಬಂದ್ಗೆ ಬೆಂಬಲ ಸೂಚಿಸಿದ್ದವು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.