ಗುರುವಾರ , ಫೆಬ್ರವರಿ 25, 2021
31 °C

ಮಾನವ ಹಕ್ಕುಗಳ ರಕ್ಷಕ ನ್ಯಾಯಾಂಗ: ನ್ಯಾಯಾಧೀಶ ಬಿ.ಸಿ.ಬಿರಾದಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬಳ್ಳಾರಿ: ಮಾನವ ಹಕ್ಕುಗಳ ಉಲ್ಲಂಘನೆ ತಡೆಯುವಲ್ಲಿ ನ್ಯಾಯಾಂಗದ ಪಾತ್ರ ಬಹುದೊಡ್ಡದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಬಿ.ಸಿ.ಬಿರಾದಾರ ಅಭಿಪ್ರಾಯಪಟ್ಟರು.

ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಕುಟುಂಬ ಮತ್ತು ಸಮಾಜದಲ್ಲಿ ಆಗುವ ಮೋಸ ಹಾಗೂ ವಂಚನೆಗಳಿಂದ ಪಾರಾಗಲು ಮಾನವ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಮಾನವ ಹಕ್ಕುಗಳನ್ನು ಜಾರಿಗೊಳಿಸುವಲ್ಲಿ ದೇಶ ಹಿಂದುಳಿದಿಲ್ಲ. ಪ್ರತಿಯೊಬ್ಬರು ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವ ಅನಿವಾರ್ಯತೆ ಇದೆ. ಎಲ್ಲಿ ನೋಡಿದರೂ ಮೋಸ, ವಂಚನೆ ತಾಂಡವವಾಡುತ್ತಿದೆ. ಮಾನವ ಹಕ್ಕುಗಳು ನಿಮಗೆ ರಕ್ಷಣೆ ನೀಡಲಿವೆ’ ಎಂದು ಹೇಳಿದರು.

ವಿಎಸ್‍ಆರ್ ಕಾನೂನು ಕಾಲೇಜಿನ ಪ್ರಾಚಾರ್ಯೆ ಕೆ.ರಜನಿಕುಮಾರಿ ಉಪನ್ಯಾಸ ನೀಡಿ,‘ಮಾನವ ಹಕ್ಕುಗಳು ಸಂವಿಧಾನದಲ್ಲಿ ಅಡಕವಾಗಿವೆ. ಹಕ್ಕುಗಳಿಗೆ ವಿರುದ್ಧವಾಗಿ ಸರ್ಕಾರ ಶಾಸನ ರಚಿಸುವಂತಿಲ್ಲ. ಒಂದು ವೇಳೆ ರಚಿಸಿದರೆ ಶೂನ್ಯವಾಗುತ್ತದೆ’ ಎಂದು ಹೇಳಿದರು.

ಜಾಗೃತಿ ಜಾಥಾ

ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ಜಾಥಾ, ಮುನ್ಸಿಪಲ್ ಕಾಲೇಜು ಮೈದಾನದಿಂದ ರಂಗಮಂದಿರದವರೆಗೆ ಸಾಗಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಬಿ.ಹಂದ್ರಾಳ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ, ಕಾರ್ಯದರ್ಶಿ ಎಸ್.ಬಿ.ಅರಸೂರು, ವಕೀಲ ಕೆ.ಯರ್ರಿಗೌಡ, ತಹಶೀಲ್ದಾರ್ ನಾಗರಾಜ, ಪಾಲಿಕೆ ಆಯುಕ್ತ ಮೊಹಮ್ಮದ್ ಮುನೀರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು