ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚುನಾವಣೆ ಬಳಿಕ ದಲಿತ ಸಿ.ಎಂ ಚರ್ಚೆ’

Last Updated 4 ಮೇ 2018, 19:36 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ ಈ ಮೂವರಲ್ಲಿ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದನ್ನು ಈಗಲೇ ಹೇಳಲಾಗದು. ಚುನಾವಣೆಯ ಫಲಿತಾಂಶ ಬಂದ ಬಳಿಕವಷ್ಟೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯು ಆ ಬಗ್ಗೆ ನಿರ್ಧರಿಸಲಿದೆ’ ಎಂದು ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಸುಶೀಲ್‌ಕುಮಾರ್‌ ಶಿಂಧೆ ಶುಕ್ರವಾರ ಇಲ್ಲಿ ಹೇಳಿದರು.

‘ಕಾಂಗ್ರೆಸ್‌, ದಲಿತ ಸಮುದಾಯದ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂಬ ಮೋದಿ ಹೇಳಿಕೆಯನ್ನು ಒಪ್ಪಲಾಗದು. ಇನ್ನೂ ಚುನಾವಣೆ ಮುಗಿದಿಲ್ಲ; ಫಲಿತಾಂಶ ಬಂದಿಲ್ಲ. ಹಾಗಾಗಿ, ರಾಜ್ಯದ ಚುಕ್ಕಾಣಿ ಯಾರು ಹಿಡಿಯಬೇಕು ಎಂಬುದನ್ನು ನಿರ್ಧರಿಸಲು ಇದು ಸಕಾಲವಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT