ಬುಧವಾರ, ಅಕ್ಟೋಬರ್ 23, 2019
27 °C

ಹೂವಿನಹಡಗಲಿ ಜಿಲ್ಲೆಗೆ ಆಗ್ರಹಿಸಿ ಉಪವಾಸ

Published:
Updated:

ಹೂವಿನಹಡಗಲಿ/ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಪಶ್ಚಿಮ ತಾಲ್ಲೂಕುಗಳನ್ನು ಒಳಗೊಂಡು ಹೂವಿನಹಡಗಲಿ ನೂತನ ಜಿಲ್ಲೆ ರಚನೆಗೆ ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.

ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಜಿಲ್ಲಾ ಹೋರಾಟ ಸಮಿತಿಯ ಪದಾಧಿಕಾರಿಗಳು ಇಡೀ ದಿನ ಧರಣಿ ನಡೆಸಿದರು. ‘ಪ್ರಮುಖ ಇಲಾಖೆಗಳ ವಿಭಾಗ, ಉಪ ವಿಭಾಗ ಮತ್ತು ಎಲ್ಲ ರೀತಿಯ ಮೂಲಸೌಕರ್ಯ ಹೊಂದಿರುವ ಹಡಗಲಿ ತಾಲ್ಲೂಕು ಜಿಲ್ಲಾ ಕೇಂದ್ರವಾಗಲು ಸೂಕ್ತವಾಗಿದೆ. ನಂಜುಂಡಪ್ಪ ಆಯೋಗದ ವರದಿ ಅನ್ವಯ ಹಿಂದುಳಿದ ತಾಲ್ಲೂಕನ್ನು ಹೊಸ ಜಿಲ್ಲೆಯಾಗಿಸಿ ಪ್ರಾದೇಶಿಕ ಅಸಮತೋಲನ ನಿವಾರಿಸಬೇಕು. ವೈಜ್ಞಾನಿಕವಾಗಿ, ಭೌಗೋಳಿಕವಾಗಿಯೇ ಹೊಸ ಜಿಲ್ಲೆಯನ್ನು ವರ್ಗೀಕರಿಸಬೇಕು’ ಎಂದು ಒತ್ತಾಯಿಸಿದರು. 

ಮಠಾಧೀಶರು, ಪ್ರಗತಿಪರ ಸಂಘಟನೆಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆ ಘೋಷಿಸಬೇಕೆಂದು ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಬಳ್ಳಾರಿ–ಅಂಕೋಲ ರಾಷ್ಟ್ರೀಯ ಹೆದ್ದಾರಿ ಮೇಲೆ ರಸ್ತೆತಡೆ ಚಳವಳಿ ನಡೆಸಿದರು. ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು, ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)