ಬುಧವಾರ, ಆಗಸ್ಟ್ 17, 2022
30 °C

ಅಕ್ರಮ ಮದ್ಯ ಮಾರಾಟ: ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಅನಂತಶಯನಗುಡಿ ನಿವಾಸಿ ಹುಲುಗಪ್ಪ ಹನುಮಂತಪ್ಪ (22) ಎಂಬಾತನನ್ನು ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

‘ಮದ್ಯ ಮಾರಾಟದ ಕುರಿತು ಡಿ. 13ರಂದು ದೂರು ಬಂದಿತ್ತು. ಈ ಕುರಿತು ತನಿಖೆ ನಡೆಸಿ, ಹುಲುಗಪ್ಪನನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ. ಆತನಿಂದ ₹1,765 ಮೊತ್ತದ 50 ವಿಸ್ಕಿ ಟೆಟ್ರಾ ಪ್ಯಾಕೆಟ್‌ ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.