ಶನಿವಾರ, ಮೇ 21, 2022
28 °C

ಅಕ್ರಮ ಮದ್ಯ ಸಂಗ್ರಹ: ಮೂವರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ನಗರದ ‘ಚೋಳ’ ವೈನ್ಸ್, ಬಾರ್‌ ಅಂಡ್‌ ರೆಸ್ಟೊರೆಂಟ್‌ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಮಳಿಗೆಯ ಮಾಲೀಕ ಉಪಾಸನಾ ತಪ್ಪಿಸಿಕೊಂಡಿದ್ದಾರೆ. ‘ಮದ್ಯದಂಗಡಿಗಷ್ಟೇ ಪರವಾನಗಿ ಪಡೆದಿದ್ದಾರೆ. ಆದರೆ, ಬಾರ್‌ ಅಂಡ್‌ ರೆಸ್ಟೊರೆಂಟ್‌ ನಡೆಸುತ್ತಿದ್ದರು. ಅಕ್ರಮವಾಗಿ ಮದ್ಯ ಕೂಡ ಅಲ್ಲಿ ಸಂಗ್ರಹಿಸಿ ಇಟ್ಟಿದ್ದರು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ, 37 ಲೀಟರ್ ಅಕ್ರಮ ಮದ್ಯ, ಆರು ಸಾವಿರ ನಗದು, ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ. ಮೂವರನ್ನು ವಶಕ್ಕೆ ಪಡೆಯಲಾಗಿದೆ. ಮಾಲೀಕನ ಪತ್ತೆ ಕಾರ್ಯ ನಡೆದಿದೆ’ ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ. ಶ್ರೀನಿವಾಸ ರಾವ್‌ ತಿಳಿಸಿದ್ದಾರೆ.
ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು